
ಜಮಖಂಡಿ:ಏ.4:ಚಿಕ್ಕಪಡಸಲಗಿ ಗ್ರಾಮದ ಸಮೀಪ ಕೃಷ್ಣಾ ನದಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಮೃತರನ್ನು ಚಿಕ್ಕಪಡಸಲಗಿ ಗ್ರಾಮದ 55 ವರ್ಷದ ಮಹಾದೇವ ಶಿವಗೊಂಡ ಕಲ್ಯಾಣಿ ಎಂದು ಗುರುತಿಸಲಾಗಿದೆ.
ಚಿಕ್ಕಪಡಸಲಗಿ ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಪ್ರಕರಣದ ನಿಖರ ಕಾರಣ ತನಿಖೆಯ ನಂತರವೇ ತಿಳಿದುಬರಬೇಕಿದೆ.
ಸ್ಥಳೀಯರು ಗಮನಿಸಿ ಪೆÇಲೀಸರಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಜಮಖಂಡಿ ಗ್ರಾಮೀಣ ಪೆÇಲೀಸ್ ಠಾಣೆಯ ಪಿಎಸ್‍ಐ ಗಂಗಾಧರ ಪೂಜೆರಿ ಹಾಗೂ ಸಿಬ್ಬಂದಿಗಳಾದ ಬಿ.ಎಂ. ಜಂಬಗಿ, ಎಸ್.ಪಿ. ಮಠಪತಿ, ಸಿದ್ದು ಸನಗೌಡರ, ಆರ್.ಎಸ್. ಮುಲ್ಲಾ, ಪಿ.ಎಚ್. ಘಾಟಗೆ, ಸಿದ್ದು ಬಿರಾದಾರ ಸೇರಿದಂತೆ ಇನ್ನಿತರರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಘಟನೆ ಜಮಖಂಡಿ ಗ್ರಾಮೀಣ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

























