Home ಜಿಲ್ಲೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಮುಂಜಾಗ್ರತೆ ವಹಿಸಿ : ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚನೆ

ನೀರು ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಮುಂಜಾಗ್ರತೆ ವಹಿಸಿ : ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚನೆ

ಸಂಜೆವಾಣಿ ವಾರ್ತೆ,
ವಿಜಯಪುರ, ಏ. ೫: ಪ್ರಸ್ತುತ ಬೇಸಿಗೆ ಆರಂಭವಾಗಿರುವುದರಿAದ ನಗರದ ಪ್ರತಿ ವಾರ್ಡ್ ಹಾಗೂ ವಲಯಗಳಲ್ಲಿ ಕುಡಿಯುವ ನೀರಿನ ತೊಂದರೆಯಾಗದAತೆ ಅಗತ್ಯ ಮುಂಜಾಗ್ರತೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಕುಡಿಯುವ ನೀರು ಸರಬರಾಜು ವ್ಯವಸ್ಥೆ ಕುರಿತು ಶನಿವಾರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ತುರ್ತು ಸಭೆಯಲ್ಲಿ ಅವರು ಮಾತನಾಡಿದರು.
ಜಲಮಂಡಳಿ, ಮಹಾನಗರ ಪಾಲಿಕೆ, ಹಾಗೂ ಹೆಸ್ಕಾಂ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡುವ ಮೂಲಕ ಬೇಸಿಗೆಯಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ನೋಡಿಕೊಳ್ಳಲು ಸೂಚಿಸಿದರು.
ಅನಗತ್ಯವಾಗಿ ಕುಡಿಯುವ ನೀರು ಪೋಲಾಗದಂತೆ ನೋಡಿಕೊಳ್ಳಲು ಸಾರ್ವಜನಿಕರಿಗೆ ತಿಳಿವಳಿಕೆ ನೀಡಬೇಕು ಎಂದು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಒಂದು ವೇಳೆ ಕುಡಿಯುವ ನೀರು ಪೋಲು ಕಂಡುಬAದಲ್ಲಿ ೨ ಸಾವಿರ ರೂ. ಹಾಗೂ ಅನಧಿಕೃತ ನಳ ಸಂಪರ್ಕ ಪಡೆದುಕೊಂಡವರಿಗೆ ೫ ಸಾವಿರ ರೂ ದಂಡ ವಿಧಿಸಬೇಕೆಂಬ ಮಹಾನಗರ ಪಾಲಿಕೆಯ ಠರಾವಿನ ಷರತ್ತುಗಳನ್ವಯ ದಂಡ ವಿಧಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಇದೇ ವೇಳೆ ಸೂಚನೆ ನೀಡಿದರು.
ಜಲಮಂಡಳಿಯ ಎಲ್ಲ ಅಧಿಕಾರಿಗಳಿಗೆ ಹಾಗೂ ವಾಲ್ವಮೆನ್ ಗಳಿಗೆ ಪ್ರತಿದಿನ ನೀರು ಸರಬರಾಜು ಮಾಡುವ ವಲಯ ಹಾಗೂ ವಾರ್ಡ್ ಗಳಲ್ಲಿ ಸಂಬAಧಪಟ್ಟ ವಾರ್ಡ ಸದಸ್ಯರೊಂದಿಗೆ ಸಂಪರ್ಕದಲ್ಲಿದ್ದುಕೊAಡು ಬೇಸಿಗೆಯಲ್ಲಿ ನೀರು ಸರಬರಾಜಿನಲ್ಲಿ ಅಂತರ ಕಡಿಮೆಗೊಳಿಸಿ ವ್ಯತ್ಯಯ ಉಂಟಾಗದAತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಜಲ ಮಂಡಳಿಯ ಅಧಿಕಾರಿಗಳಿಗೆ ನಿರ್ವಹಣೆಯ ಸಣ್ಣ-ಪುಟ್ಟ ತುರ್ತು ಕಾಮಗಾರಿಗಳನ್ನು ಶೀಘ್ರಗತಿಯಲ್ಲಿ ಕೈಗೊಳ್ಳಲು ಸೂಚಿಸಿದರು.
ನಗರದ ಎಲ್ಲ ಜಲಸಂಗ್ರಹಾರಗಳನ್ನು ಕಾಲಕಾಲಕ್ಕೆ ಸ್ವಚ್ಚಗೊಳಿಸಬೇಕು ಎಂದು ಸೂಚಿಸಿದ ಡಾ. ಆನಂದ ಕೆ. ಅವರು, ಸಾರ್ವಜನಿಕರು ನೀರು ಸರಬರಾಜಿಗೆ ಸಂಬAದಿಸಿದ ದೂರುಗಳಿಗೆ ಜಲಮಂಡಳಿಯ ಸಹಾಯವಾಣಿ ೯೦೭೧೪೨೩೫೧೦ ಗೆ ಸಂಪರ್ಕಿಸಲು ಸೂಚಿಸಿದರು.
ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಪಾಲಿಕೆ ಅಧೀಕ್ಷಕ ಅಭಿಯಂತರರು, ಹೆಸ್ಕಾಂ ಅಧೀಕ್ಷಕ ಅಭಿಯಂತರ ಸಿದ್ದಪ್ಪ ಬಿಂಜಗೇರಿ, ಜಲ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.