Home ಜಿಲ್ಲೆ ಕಲಬುರಗಿ ಭಾರತದ ಮಾಜಿ ಉಪ ಪ್ರಧಾನಿ ಹಾಗೂ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಮ ರವರ ಪ್ರತಿಮೆಗೆ...

ಭಾರತದ ಮಾಜಿ ಉಪ ಪ್ರಧಾನಿ ಹಾಗೂ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಮ ರವರ ಪ್ರತಿಮೆಗೆ ಮಾಲಾರ್ಪಣೆ

ಕಲಬುರಗಿ,ಏ.05:ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜಕಲ್ಯಾಣ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ ಭಾರತದ ಮಾಜಿ ಉಪ ಪ್ರಧಾನಿ ಹಾಗೂ ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನರಾಂ ರವರ 119ನೇ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಏಪ್ರಿಲ್ 5 ರಂದು ಬೆಳಿಗ್ಗೆ 9.30 ಗಂಟೆಗೆ ಕಲಬುರಗಿ ನಗರದ ಟೌನ್‍ಹಾಲ್‍ದಲ್ಲಿನ ಡಾ. ಬಾಬು ಜಗಜೀವನರಾಂ ಪ್ರತಿಮೆಗೆ ದಕ್ಷಿಣ ಮತ್ತು ಕ್ಷೇತ್ರ ಶಾಸಕರಾದ ಅಲ್ಲಮಪ್ರಭು ಪಾಟೀಲ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷೆ ಚಂದ್ರಿಕಾ ಪರಮೇಶ್ವರ್, ಜಿಲ್ಲಾ ಪಂಚಾಯತ್ ಸಿ .ಇ.ಓ ಭಂವರ್ ಸಿಂಗ್ ಮೀನಾ, ನಗರ ಪೆÇಲೀಸ್ ಆಯುಕ್ತ ಡಾ. ಶರಣಪ್ಪ ಎಸ್. ಡಿ.,ಮಹಾನಗರ ಪಾಲಿಕೆಯ ಆಯುಕ್ತರಾದ ಅವಿನಾಶ್ ಶಿಂಧೆ, ಜಿಲ್ಲಾ ಜಯಂತೋತ್ಸವ ಆಚರಣೆ ಸಮಿತಿಯ ಅಧ್ಯಕ್ಷ ಮಲ್ಲಿಕಾರ್ಜುನ ದೊಡ್ಮನಿ, ರಾಜು ವಾಡೇಕರ್, ಲಿಂಗರಾಜ ತಾರಫೈಲ್ ಸೇರಿದಂತೆ ಸಮಾಜದ ಮುಖಂಡರು ಮಾಲಾರ್ಪಣೆ ಮಾಡಿದರು.