Home ಜಿಲ್ಲೆ ರಾಜ್ಯ ಸರ್ಕಾರ ತನಿಖೆ ನಡೆಸಲಿ

ರಾಜ್ಯ ಸರ್ಕಾರ ತನಿಖೆ ನಡೆಸಲಿ


ಹುಬ್ಬಳ್ಳಿ,ಏ.೫: ಹುಬ್ಬಳ್ಳಿಯಲ್ಲಿ ಕೇರಳ ಸ್ಟೋರಿ ಮಾದರಿಯಲ್ಲಿ ನಡೆದ ಲವ್ ಜಿಹಾದ್ ಪ್ರಕರಣದ ವಿಚಾರದಲ್ಲಿ ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ತೋರಿಸಿರುವ ಮೌನ ಜನರ ವಿಶ್ವಾಸಕ್ಕೆ ತೀವ್ರ ಧಕ್ಕೆ ಉಂಟುಮಾಡಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಪಾರದರ್ಶಕ ತನಿಖೆ ನಡೆಸಬೇಕು ಎಂದು ಬಿಜೆಪಿ ಯುವ ಮುಖಂಡ ವೆಂಕಟೇಶ ಕಾಟವೆ ಆಗ್ರಹಿಸಿದ್ದಾರೆ.


ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಹಿಳೆಯರ ಭದ್ರತೆ ಮತ್ತು ನಂಬಿಕೆಯನ್ನು ಕಾಪಾಡುವುದು ಸರ್ಕಾರದ ಮೊದಲ ಕರ್ತವ್ಯ. ಆದರೆ ಇಂತಹ ಸೂಕ್ಷ÷್ಮ ಹಾಗೂ ಸಂವೇದನಾಶೀಲ ವಿಷಯದ ಬಗ್ಗೆ ಗೃಹ ಸಚಿವರು ಸ್ಪಷ್ಟನೆ ನೀಡದೇ ತೆರಳಿರುವುದು ಸರ್ಕಾರದ ನಿಲುವಿನ ಬಗ್ಗೆ ಗಂಭೀರ ಅನುಮಾನ ಮೂಡಿಸುತ್ತದೆ. ಇದು ಕೇವಲ ಒಂದು ಘಟನೆಯಲ್ಲ, ಸಮಾಜದ ಶಾಂತಿ ಹಾಗೂ ಸಾಮರಸ್ಯಕ್ಕೆ ಸಂಬAಧಿಸಿದ ವಿಷಯವಾಗಿದೆ ಎಂದು ಅವರು ಹೇಳಿದ್ದಾರೆ.


ಈ ಪ್ರಕರಣದಲ್ಲಿ ಸಮೀರ್ ಮುಲ್ಲಾ ಹಾಗೂ ಆತನ ಸಹಚರರ ಮೇಲೆ ಕಠಿಣ ಕ್ರಮ ಕೈಗೊಂಡು ಜನತೆಗೆ ಸ್ಪಷ್ಟ ಮಾಹಿತಿ ರವಾನಿಸಬೇಕು. ಇಲ್ಲವಾದಲ್ಲಿ ಜನರ ವಿಶ್ವಾಸವನ್ನು ಕಳೆದುಕೊಂಡ ಸರ್ಕಾರಕ್ಕೆ ಜನರೇ ಪಾಠ ಕಲಿಸುವ ದಿನ ದೂರವಿಲ್ಲ ಎಂದು ಕಾಟವೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.