Home ಜಿಲ್ಲೆ ಕಲಬುರಗಿ ಬಾಬು ಜಗಜೀವನ್ ರಾಮ್ ಜಯಂತಿ ಆಚರಣೆ

ಬಾಬು ಜಗಜೀವನ್ ರಾಮ್ ಜಯಂತಿ ಆಚರಣೆ

ಚಿತ್ತಾಪುರ; ಏ.5:ಪಟ್ಟಣದ ಜೆಡಿಎಸ್ ಪಕ್ಷದ ಕಚೇರಿ ಆವರಣದಲ್ಲಿ ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನ್ ರಾಮ್ ಅವರ ಜಯಂತಿ ಆಚರಣೆ ಮಾಡಲಾಯಿತು.
ಇದೇ ವೆಳೆ ಜೆಡಿಎಸ್ ಪಕ್ಷದ ತಾಲೂಕು ಅಧ್ಯಕ್ಷ ಮಂಜುನಾಥಗೌಡ ಪೆÇಲೀಸ್ ಪಾಟೀಲ್ ಅವರು ಬಾಬು ಜಗಜೀವನ್ ರಾಮ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ರವಿ ಕಲ್ಲಕ್, ಸೋಯಲ್ ಕರ್ನೂಲ್, ಮಲ್ಲಿಕಾರ್ಜುನ ಭಾಗೋಡಿ, ಲಕ್ಷ್ಮೀಕಾಂತ ಕಲ್ಮರಿ, ಗೌತಮ್ ತಾಮನೂರ್, ಬಸವರಾಜ ಬಟಗೇರಿ ಸೇರಿದಂತೆ ಜೆಡಿಎಸ್ ಪಕ್ಷದ ಅನೇಕ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಇದ್ದರು.