Home ಜಿಲ್ಲೆ ಬೆಂಗಳೂರು ಅದ್ಧೂರಿ ವೇಣುಗೋಪಾಲಸ್ವಾಮಿ ರಥೋತ್ಸವ

ಅದ್ಧೂರಿ ವೇಣುಗೋಪಾಲಸ್ವಾಮಿ ರಥೋತ್ಸವ

ಕೋಲಾರ,ಏ,೭- ತಾಲ್ಲೂಕಿನ ಗರುಡನಹಳ್ಳಿ ಗ್ರಾಮದಲ್ಲಿ ನೆಲೆಸಿರುವ ೩೫೦ ವರ್ಷಗಳ ಪುರಾಣ ಪ್ರಸಿದ್ಧ ಶ್ರೀ ರುಕ್ಮಣಿ ಸತ್ಯಭಾಮ ಸಮೇತ ಶ್ರೀ ವೇಣುಗೋಪಾಲಸ್ವಾಮಿ ಹಾಗೂ ಶ್ರೀ ಸೀತಾರಾಮ, ಲಕ್ಷ್ಮಣ, ಆಂಜನೇಯಸ್ವಾಮಿಯ ೧೯ನೇ ವರ್ಷದ ರಥೋತ್ಸವವನ್ನು ಶ್ರದ್ಧಾಭಕ್ತಿಗಳಿಂದ ನೆರವೇರಿತು. ಅಲಂಕೃತ ರಥದಲ್ಲಿ ಉತ್ಸವಮೂರ್ತಿಯನ್ನು ಕುಳ್ಳರಿಸಿ ಗ್ರಾಮದ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.


ಗರುಡನಹಳ್ಳಿ ಗ್ರಾಮಸ್ಥರು ಅನ್ನದಾನಕ್ಕೆ ಚಾಲನೆ ನೀಡಿ ಮಾತನಾಡಿ, ಶ್ರೀ ವೇಣುಗೋಪಾಲ ಸ್ವಾಮಿ ರಥೋತ್ಸವವನ್ನು ಪ್ರತಿ ವರ್ಷವೂ ಶ್ರದ್ದಾಭಕ್ತಿಯಿಂದ ಬಹಳ ಅದ್ದೂರಿಯಾಗಿ ಆಚರಿಸಿಕೊಂಡು ಬರುತ್ತಿರುವುದಾಗಿ ಹೇಳಿದರು. ನೂರಾರು ಮಂದಿ ಭಕ್ತರು ರಥೋತ್ಸವ ಹಾಗೂ ದೇವಾಲಯ ಪೂಜೆಯಲ್ಲಿ ಭಾಗವಹಿಸಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ರಾತ್ರಿ ೭ಗಂಟೆಗೆ ಬಾಣ ಬಿರುಸು ಪ್ರದರ್ಶನ ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆದವು.


ಈ ಸಂದರ್ಭದಲ್ಲಿ ಶ್ರೀ ವೇಣುಗೋಪಾಲಸ್ವಾಮಿ ಹಾಗೂ ಶ್ರೀ ಆಂಜನೇಯ ಸೇವಾ ಸಮಿತಿ ಪದಾಧಿಕಾರಿಗಳು, ಗರುಡನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಹಾಜರಿದ್ದರು.