Home ಮುಖಪುಟ ಸುದ್ದಿ ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಪ್ರಕಟ

ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು,ಏ.೮-ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (ಏSಇಂಃ) ದ್ವಿತೀಯ ಪಿಯುಸಿ ಪರೀಕ್ಷೆ-೧ರ ಫಲಿತಾಂಶವನ್ನು ನಾಳೆ ಏಪ್ರಿಲ್ ೯, ೨೦೨೬ರಂದು ಪ್ರಕಟವಾಗಲಿದೆ. ಮಂಡಳಿಯು ಸುದ್ದಿಗೋಷ್ಠಿ ಮೂಲಕ ಫಲಿತಾಂಶ ಪ್ರಕಟಿಸಲಿದ್ದು, ಶಿಕ್ಷಣ ಸಚಿವ ಮಧು ಬಂಗಾರಪ್ಪ ಫಲಿತಾಂಶ ಬಿಡುಗಡೆ ಮಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಏಪ್ರಿಲ್ ೯ರಂದು ಫಲಿತಾಂಶ ಪ್ರಕಟವಾಗಲಿದೆ.


ಈ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಗಳು ಫೆಬ್ರವರಿ ೨೮ರಿಂದ ಮಾರ್ಚ್ ೧೭ರವರೆಗೆ ರಾಜ್ಯಾದ್ಯಂತ ನಡೆದಿದ್ದವು. ಪರೀಕ್ಷೆಗೆ ಒಟ್ಟು ೭,೧೦,೩೬೩ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ರಾಜ್ಯದ ೧,೨೧೭ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಯಶಸ್ವಿಯಾಗಿ ನಡೆಸಲಾಗಿತ್ತು.


ಮೊದಲಿಗೆ ಮಂಡಳಿಯು ಏಪ್ರಿಲ್ ೭ರಂದು ಫಲಿತಾಂಶ ಪ್ರಕಟಿಸುವ ಸೂಚನೆ ನೀಡಿದ್ದರೂ, ಚುನಾವಣಾ ನೀತಿ ಸಂಹಿತೆಯ ಅನುಮತಿ ಪ್ರಕ್ರಿಯೆ ಹಿನ್ನೆಲೆಯಲ್ಲಿ ಫಲಿತಾಂಶ ಪ್ರಕಟಣೆ ಮುಂದೂಡಲಾಗಿತ್ತು .ಈಗ ಚುನಾವಣೆ ಅಯೋಗ ಫಲಿತಾಂಶ ಪ್ರಕಟಣೆಗೆ ಒಪ್ಪಿಗೆ ಸೂಚಿಸಿದ್ದು. ನಾಳೆ ಫಲಿತಾಂಶ ಹೊರಬಿಳಲಿದೆ.
ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ಗಳಾದ


ಞಚಿಡಿಡಿesuಟಣs.ಟಿiಛಿ.iಟಿ ಹಾಗೂ ಞseಚಿb.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ವೀಕ್ಷಿಸಬಹುದಾಗಿದೆ.
ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿರುವ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಣೆಗೆ ಕ್ಷಣಗಣನೆ ಆರಂಭವಾಗಿದೆ..