
ನವದೆಹಲಿ, ಏ. ೮- ಗುಜರಾತ್ ಜನರು ಅನಕ್ಷರಸ್ಥರು ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಮಾತಿಗೆ ವಿಷಾದ ವ್ಯಕ್ತಪಡಿಸಿದ್ದಾರೆ.
ಕೇರಳ ವಿಧಾನಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆರವರು ಗುಜರಾತ್ ಜನರು ಅನಕ್ಷರಸ್ಥರು ಎಂಬ ಹೇಳಿಕೆ ನೀಡಿದ್ದು ವಿವಾದಕ್ಕೆ ಕಾರಣವಾಗಿತ್ತು. ತಮ್ಮ ಮಾತಿಗೆ ದೊಡ್ಡ ಮಟ್ಟದಲ್ಲಿ ವಿರೋಧ ವ್ಯಕ್ತವಾಗುತ್ತಿದ್ದಂತೆಯೇ ಖರ್ಗೆ ಅವರು ವಿಷಾದ ವ್ಯಕ್ತಪಡಿಸಿ, ತಮ್ಮ ಮಾತಿನಿಂದ ಯಾರ ಮನಸ್ಸಿಗೆ ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇನೆ ಎಂದಿದ್ದಾರೆ.
ನನ್ನ ಮಾತಿನ ಉದ್ದೇಶ ಯಾರನ್ನು ಅವಮಾನಿಸುವುದಾಗಲಿ ಯಾರಿಗಾದರೂ ನೋವು ಉಂಟು ಮಾಡುವುದಲ್ಲ. ಏನೇ ಇರಲಿ ನನ್ನ ಮಾತಿಗೆ ವಿಷಾದ ವ್ಯಕ್ತಪಡಿಸುತ್ತೇನೆ. ತಮ್ಮ ಮಾತಿನಿಂದ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ ಎಂದಿದ್ದಾರೆ.
ಎಐಸಿಸಿ ಅಧ್ಯಕ್ಷರ ಮಾತಿಗೆ ಬಿಜೆಪಿ ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಆಕ್ರೋಶ ಹೊರಹಾಕಿ ಖರ್ಗೆ ಅವರು ತಮ್ಮ ಮಾತಿಗೆ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದವು.























