Home ಜಿಲ್ಲೆ ವಾರ್ಷಿಕೋತ್ಸವ ಕಾರ್ಯಕ್ರಮ

ವಾರ್ಷಿಕೋತ್ಸವ ಕಾರ್ಯಕ್ರಮ


ಗದಗ,ಏ.೮: ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ-ಬೆಟಗೇರಿ ಸಂಸ್ಥೆಯ ೨೦೨೫-೨೬ ನೇ ಸಾಲಿನ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಜರುಗಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಜಿ.ಎನ್.ಟಿ.ಟಿ.ಎಫ್ ಅಧ್ಯಕ್ಷರಾದ ಕೆ.ಹೆಚ್.ಪಾಟೀಲ್, ಜ್ಯೋತಿ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶಿಕ್ಷಣ, ಕೌಶಲ್ಯ ಚಟುವಟಿಕೆಗಳು, ವಿನ್ಯಾಸ ಮತ್ತು ಸ್ವ-ಉದ್ಯೋಗದ ಕುರಿತು ವಿದ್ಯಾರ್ಥಿಗಳಿಗೆ ಸಲಹೆಗಳನ್ನು ಅವರು ನೀಡಿದರು.


ಸಂಸ್ಥೆಯ ಜಂಟಿ ನಿರ್ದೇಶಕರು/ಪ್ರಾಂಶುಪಾಲರಾದ ಶ್ರೀಮತಿ ಸುಮಲತ.ಡಿ. ಅವರು ವಾರ್ಷಿಕ ವರದಿಯನ್ನು ಓದಿ ಸಂಸ್ಥೆಯ ಸಾಧನೆಗಳನ್ನು ವಿವರಿಸಿದರು.
ಶೈಕ್ಷಣಿಕ, ಕ್ರೀಡೆ ಮತ್ತು ಸಾಂಸ್ಕöÈತಿಕ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಮುಖ್ಯ ಅತಿಥಿಗಳು ಬಹುಮಾನ ಮತ್ತು ಪ್ರಶಸ್ತಿಗಳನ್ನು ವಿತರಿಸಿದರು.


ನಂತರ ನಡೆದ ಸಾಂಸ್ಕöÈತಿಕ ಕಾರ್ಯಕ್ರಮಗಳು ಪ್ರೇಕ್ಷಕರನ್ನು ಮಂತ್ರಮುಗ್ಧಗೊಳಿಸಿದವು. ವಿದ್ಯಾರ್ಥಿಗಳು ಪ್ರದರ್ಶಿಸಿದ ಜಾನಪದ ನೃತ್ಯ, ದೇಶಭಕ್ತಿ ಗೀತೆ, ನಾಟಕಗಳು ಕಾರ್ಯಕ್ರಮದ ಮೆರುಗು ಹೆಚ್ಚಿಸಿದವು .
ಈ ಸಂದರ್ಭದಲ್ಲಿ ಶ್ರೀಮತಿ ಅನುಪಮಾ ಹಿರೇಮಠ, ಉಪ ನಿರ್ದೇಶಕರು, ಕರ್ನಾಟಕ ಕೈಮಗ್ಗ ಅಭಿವೃದ್ದಿ ನಿಗಮ, ಹುಬ್ಬಳ್ಳಿ ಹಾಗೂ ಕುಮಾರಿ.ರಕ್ಷೀತಾ ಮಾಲಿಪಾಟೀಲ್, ವಿದ್ಯಾರ್ಥಿಗಳ ಕಾರ್ಯದರ್ಶಿ ಹಾಗೂ ಸಂಸ್ಥೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಮತ್ತು ಸಂಸ್ಥೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.