
ನವಲಗುಂದ,ಏ9 : ಆರೋಗ್ಯದ ಬಗ್ಗೆ ಪ್ರತಿಯೊಬ್ಬರೂ ಜಾಗೃತರಾಗಬೇಕು. ದಿನನಿತ್ಯ ವ್ಯಾಯಾಮ, ಸಮತೋಲನ ಆಹಾರ ಹಾಗೂ ಸ್ವಚ್ಛತೆಯ ಮಹತ್ವವನ್ನು ಸರ್ಕಾರಿ ಪ್ರಥಮದರ್ಜೆ ಕಾಲೇಜು ಪ್ರಾಚಾರ್ಯರಾದ ಎಂ ಬಿ ಬಾಗಡಿ ವಿದ್ಯಾರ್ಥಿಗಳಿಗೆ ವಿವರಿಸಿದರು.
ಅವರು ವಿಶ್ವ ಆರೋಗ್ಯ ದಿನಾಚರಣೆ ಅಂಗವಾಗಿ ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಂದ ಆರೋಗ್ಯ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.
ನಂತರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜಾಥಾ ಸಂಚರಿಸಿತು. ವಿದ್ಯಾರ್ಥಿಗಳು ಸ್ವಸ್ಥ ಜೀವನ ಸುಖೀ ಜೀವನ'',ಆರೋಗ್ಯವೇ ಮಹಾಭಾಗ್ಯ”, “ಸ್ವಚ್ಛತೆ ಕಾಪಾಡಿ ಆರೋಗ್ಯ ಉಳಿಸಿ” ಎಂಬ ಘೋಷಣೆಗಳನ್ನು ಕೂಗಿ ಜನರಲ್ಲಿ ಅರಿವು ಮೂಡಿಸಿದರು. ಕೈಯಲ್ಲಿ ಫಲಕಗಳನ್ನು ಹಿಡಿದು, ಆರೋಗ್ಯದ ಬಗ್ಗೆ ಸಂದೇಶಗಳನ್ನು ಸಾರಿದರು.
ಮಹಾವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕರಾದ ಮಂಜುನಾಥ ಜಾಡರ, ಪೆÇ್ರ ಆಯ್ ಬಿ ಸಾತಿಹಾಳ ಸೇರಿ ಬೋಧಕ ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.






















