
ಧಾರವಾಡ,ಏ13: ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾಗಿದ್ದ ದಿವಂಗತ ಪೈರೋಜ್ ಪಠಾಣ್ ಅವರ ನಿವಾಸಕ್ಕೆ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯೆ ಹಾಗೂ ಶಾಸಕ ವಿನಯ ಕುಲಕರ್ಣಿ ಅವರ ಪುತ್ರಿ ವೈಶಾಲಿ ವಿನಯ ಕುಲಕರ್ಣಿ ಅವರು ಭೇಟಿ ನೀಡಿ, ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಪೈರೋಜ್ ಪಠಾಣ್ ಅವರ ಅಕಾಲಿಕ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ ವೈಶಾಲಿ ವಿನಯ ಕುಲಕರ್ಣಿ ಅವರು, ಮೃತರ ಕುಟುಂಬದ ಸದಸ್ಯರೊಂದಿಗೆ ಮಾತನಾಡಿ, ಅವರ ದುಃಖದಲ್ಲಿ ನಾವೆಲ್ಲರೂ ಭಾಗಿಯಾಗಿದ್ದೇವೆ. ಪಕ್ಷ ಮತ್ತು ನಮ್ಮ ಕುಟುಂಬದ ವತಿಯಿಂದ ನೀಡಬೇಕಾದ ಎಲ್ಲಾ ರೀತಿಯ ಸಹಕಾರ ಮತ್ತು ಬೆಂಬಲವನ್ನು ನೀಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಮತ್ತು ಪೈರೋಜ್ ಪಠಾಣ್ ಅವರ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.


















