Home ಜಿಲ್ಲೆ ಪೂರ್ವಭಾವಿ ಸಭೆ

ಪೂರ್ವಭಾವಿ ಸಭೆ

ಧಾರವಾಡ, ಏ.14: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಏಪ್ರೀಲ್ 20, 2026 ರಂದು ಸಂಜೆ 5 ಗಂಟೆಗೆ ಕರ್ನಾಟಕ ಸಾಂಸ್ಕøತಿಕ ನಾಯಕ ಶ್ರೀ ಬಸವೇಶ್ವರ ಜಯಂತಿ, ಏಪ್ರೀಲ್ 21 ರಂದು ಸಂಜೆ 5 ಗಂಟೆಗೆ ಶ್ರೀ ಶಂಕರಾಚಾರ್ಯರ ಜಯಂತಿ ಕಾರ್ಯಕ್ರಮ ಹಾಗೂ ಏಪ್ರೀಲ್ 23 ರಂದು ಬೆಳಿಗ್ಗೆ 11.30 ಗಂಟೆಗೆ ಶ್ರೀ ಭಗೀರಥ ಜಯಂತಿಗಳನ್ನು ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕøತಿಕ ಭವನದಲ್ಲಿ ಆಯೋಜಿಸಲಾಗುತ್ತದೆ ಎಂದು ಎಡಿಸಿ ಅವರಾದ ಗೀತಾ ಸಿ.ಡಿ. ಅವರು ಹೇಳಿದರು.


ಅವರು ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ವಿವಿಧ ಜಯಂತಿ ಕಾರ್ಯಕ್ರಮಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.


ಜಯಂತಿ ಕಾರ್ಯಕ್ರಮಗಳನ್ನು ನಾವೆಲ್ಲರೂ ವಿಜೃಂಭಣೆಯಿಂದ ಪ್ರತಿವರ್ಷದಂತೆ ಆಚರಿಸೋಣ. ವಿವಿಧ ಜಯಂತಿಗಳನ್ನು ಅರ್ಥ ಗರ್ಭಿತವಾಗಿ, ಅರ್ಥಪೂರ್ಣವಾಗಿ ಕಾರ್ಯಕ್ರಮಗಳನ್ನು ನಡೆಸಬೇಕು. ಅವರು ಹೇಳಿದರು.


ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.


ಸಭೆಯಲ್ಲಿ ವಿವಿಧ ಸಮಾಜದ ಹಿರಿಯ ಮುಖಂಡರು, ಪದಾಧಿಕಾರಿಗಳು ಉಪಸ್ಥಿತರಿದ್ದರು.