
ಕಲಬುರಗಿ ;ಏ.15: ಸಂವಿಧಾನ ಶಿಲ್ಪಿ, ಭಾರತ ರತ್ನ, ವಿಶ್ವ ಜ್ಞಾನಿ ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರ ಆಸೆಯಂತೆ ನಾವೆಲ್ಲರೂ ನಮ್ಮ ಮಕ್ಕಳಿಗೆ ಒಳ್ಳೆಯ ಗುಣಮಟ್ಟದ ಶಿಕ್ಷಣ ಕೊಡಿಸಿದಾಗ್ ಮಾತ್ರ ಅಂಬೇಡ್ಕರ್ ಅವರು ಕಂಡ ಕನಸು ನನಸಾಗಲು ಸಾದ್ಯ ಎಂದು ಕಲ್ಯಾಣ ನ್ಯೂಸ್ ದಿನಪತ್ರಿಕೆ ಸಂಪಾದಕರು ಹಾಗೂ ದ್ವಿಚಕ್ರ ವಾಹನ ಮೆಕ್ಯಾನಿಕ್ ಅಸೋಸಿಯೇಷನ್ ಜಿಲ್ಲಾದ್ಯಕ್ಷರಾದ ಕಮಲಾಕರ್ ಧನ್ನಿ ಹೇಳಿದರು.
ನಗರದ ಕೋರ್ಟ್ ರಸ್ತೆಯಲ್ಲಿರುವ ಜಿಲ್ಲಾ ಕಛೇರಿಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ 135 ನೇ ಜಯಂತಿ ಆಚರಣೆ ಮಾಡಿ ಮಾತನಾಡಿದ ಅವರು, ಇಂದು ನಾವೆಲ್ಲರೂ ಸುಖಕರ ಜೀವನ ಮಾಡುತ್ತಿದ್ದೇವೆ ಎಂದರೆ ಅದಕ್ಕೆ ಪ್ರಮುಖ ಕಾರಣಿಕರ್ತರು ಬಾಬಾ ಸಾಹೇಬ್ ಅಂಬೇಡ್ಕರ್. ಸಂವಿಧಾನ ಎಂಬ ಗ್ರಂಥ ಬರೆದು ಎಲ್ಲರೂ ಸಮಾನವಾಗಿ, ಸ್ವಾಭಿಮಾನದಿಂದ ಬದುಕಲು ಅವಕಾಶ ಕಲ್ಪಿಸುವ ಮೂಲಕ ನಾವೆಲ್ಲರೂ ಅವರಿಗೆ ಚಿರರುಣಿಯಾಗಿರಬೇಕಾಗಿದೆ ಎಂದು ಧನ್ನಿ ತಿಳಿಸಿದರು.
ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಕೇವಲ ಒಂದು ಸಮುದಾಯದ ಆಚರಣೆ ಮಾಡುವುದಲ್ಲ. ಭೂಮಿ ಮೇಲಿರುವ ಪ್ರತಿಯೊಂದು ಸಮುದಾಯ ಬಹಳ ಅರ್ಥಪೂರ್ಣ ಮತ್ತು ಅದ್ದೂರಿಯಾಗಿ ಆಚರಣೆ ಮಾಡಬೇಕು. ಯಾಕೆಂದರೆ, ಅಂಬೇಡ್ಕರ್ ಅವರು 140 ಕೋಟಿ ಜನರಿಗೆ ಸೇರಿದವರು. ಮುಂಬರುವ ದಿನಗಳಲ್ಲಿ ನಾವೆಲ್ಲರೂ ಒಗ್ಗಟ್ಟಿನಿಂದ ಸಂವಿಧಾನ ಶಿಲ್ಪಿಯ ಜಯಂತಿ ಬಹಳ ಅರ್ಥಪೂರ್ಣವಾಗಿ ಆಚರಣೆ ಮಾಡೋಣ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಅಸೋಸಿಯೇಷನ್ ಪದಾಧಿಕಾರಿಗಳು ಹಾಜರಿದ್ದರು.






















