Home ಜಿಲ್ಲೆ ಕಲಬುರಗಿ ಹಾಸ್ಟೆಲ್, ವಸತಿ ಶಾಲಾ ಹೊರಗುತ್ತಿಗೆ ನೌಕರರ ಪ್ರತಿಭಟನೆ

ಹಾಸ್ಟೆಲ್, ವಸತಿ ಶಾಲಾ ಹೊರಗುತ್ತಿಗೆ ನೌಕರರ ಪ್ರತಿಭಟನೆ

ಕಲಬುರಗಿ,ಏ.15-ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಇಂದು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರಿಗೆ ಕನಿಷ್ಠ ವೇತನ 25,714 ರೂ.ಜಾರಿ ಮಾಡಬೇಕು, ಬೀದರ್ ಮಾದರಿ ಸೋಸಾಯಿಟಿ ಪ್ರಾರಂಭಿಸಬೇಕು, ಸಿಬ್ಬಂದಿ ಕಡಿತ ಆದೇಶ ಹಿಂಪಡೆಯಬೇಕು, ವಾರಕ್ಕೊಂದು ರಜೆ ಕಡ್ಡಾಯವಾಗಿ ಮಂಜೂರು ಮಾಡಬೇಕು, ಏಪ್ರಿಲ್, ಮೇ ತಿಂಗಳಲ್ಲಿ ರಜೆ ಸಮೇತ ವೇತನ ನೀಡಬೇಕು ಎಂದು ಮನವಿ ಪತ್ರದಲ್ಲಿ ಒತ್ತಾಯಿಸಲಾಗಿದೆ.
ಸಂಘದ ರಾಜ್ಯಾಧ್ಯಕ್ಷ ಭೀಮಶೆಟ್ಟಿ ಯಂಪಳ್ಳಿ, ಜಿಲ್ಲಾ ಕಾರ್ಯದರ್ಶಿ ಜಮಿರೋದ್ದಿನ್ ಬಾಬಾ, ಜಂಟಿ ಕಾರ್ಯದರ್ಶಿ ಪರಶುರಾಮ ಹಡಲಗಿ, ನಾಗರತ್ನ ಮದನಕರ, ಶಿವರಾಜ ಆಡಕಿ, ನರಸಮ್ಮ ಕೊಡಂಪಳ್ಳಿ, ಮಲ್ಲಮ್ಮ ಕೋಡ್ಲಿ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.