
ಕಲಬುರಗಿ:ಏ.೧೬: ನಗರದ ಚೌಕ್ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಸುಶೀಲಕುಮಾರ್ ಅವರ ಸೇವಾ ದಕ್ಷತೆ ಹಾಗೂ ಶ್ರೇಷ್ಠ ಕಾರ್ಯಶೈಲಿಯನ್ನು ಮೆಚ್ಚಿ ಮುಖ್ಯಮಂತ್ರಿ ಪದಕ ಪ್ರದಾನಗೊಂಡ ಹಿನ್ನೆಲೆ, ಅವರನ್ನು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ನಾಗೇಂದ್ರಪ್ಪ ತಂಬೆ ಅವರು ಕಲಬುರಗಿಯಲ್ಲಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ನಾಗೇಂದ್ರಪ್ಪ ತಂಬೆ, ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆಯ ಪಾತ್ರ ಮಹತ್ವದ್ದಾಗಿದೆ. ಅದರಲ್ಲಿ ಸುಶೀಲಕುಮಾರ್ ಅವರಂತಹ ಅಧಿಕಾರಿಗಳು ಉತ್ತಮ ಮಾದರಿಯಾಗಿದ್ದಾರೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.






















