
ಮಾಲೂರು.ಏ೧೬:ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ ವತಿಯಿಂದ ಇದೇ ೨೦ರ ಸೋಮವಾರ ಜಗಜ್ಯೋತಿ ಶ್ರೀ ಬಸವೇಶ್ವರ ಜಯಂತಿ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಣೆ ಮಾಡಲು ತೀರ್ಮಾನಿಸಲಾಗಿದೆ ಎಂದು ಶಾಸಕ ಕೆ ವೈ ನಂಜೇಗೌಡ ಹೇಳಿದರು
ತಾಲೂಕು ಕಚೇರಿಯ ಶಾಸಕರ ಕಚೇರಿಯ ಸಭಾಂಗಣದಲ್ಲಿ ತಾಲೂಕ ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ ವತಿಯಿಂದ ಜಗಜ್ಯೋತಿ ಬಸವೇಶ್ವರ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು
ಕಾಯಕವೇ ಕೈಲಾಸ ಎಂಬ ನಾಣ್ನುಡಿಯಂತೆ ಜಗಜ್ಯೋತಿ ಬಸವೇಶ್ವರರವರು ಸಮಾಜದಲ್ಲಿನ ಅಸಮಾನತೆಯನ್ನು ಹೋಗಲಾಡಿಸಲು ಅನುಭವ ಮಂಟಪ ಸ್ಥಾಪಿಸಿದರು ವಿಶ್ವದಲ್ಲಿಯೇ ಬಸವೇಶ್ವರರು ಖ್ಯಾತಿಯನ್ನು ಪಡೆದಿದ್ದಾರೆ ಅವರ ಜಯಂತೋತ್ಸವವನ್ನು ಪ್ರತಿ ವರ್ಷ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ ಸರ್ಕಾರಿ ಕಾರ್ಯಕ್ರಮ ವನ್ನಾಗಿ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತಿದೆ
ಇದೇ ೨೦ರ ಸೋಮವಾರ ಜಗಜ್ಯೋತಿ ಬಸವೇಶ್ವರ ಜಯಂತಿ ಕಾರ್ಯಕ್ರಮದ ಅಂಗವಾಗಿ ತಾಲೂಕು ಕಚೇರಿಯಲ್ಲಿ ಜಗಜ್ಯೋತಿ ಬಸವೇಶ್ವರ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಅರ್ಪಿಸಿ ನಂತರ ಮುಖ್ಯರಸ್ತೆಯಲ್ಲಿ ಬಸವೇಶ್ವರ ಭಾವಚಿತ್ರ ಮೆರವಣಿಗೆಗೆ ಚಾಲನೆ ನೀಡಲಾಗುವುದು
ಬಸವೇಶ್ವರ ಅವರ ಜಯಂತಿಯನ್ನು ಸರ್ಕಾರಿ ಕಚೇರಿಗಳು ಶಾಲಾ ಕಾಲೇಜುಗಳಲ್ಲಿ ಬಸವೇಶ್ವರರ ಭಾವಚಿತ್ರವನ್ನು ಇಟ್ಟು ಪೂಜೆ ಸಲ್ಲಿಸಿ ಕಾರ್ಯಕ್ರಮ ಆಚರಣೆ ಮಾಡಲು ತೀರ್ಮಾನಿಸಲಾಗಿದೆ ತಾಲೂಕಿನ ಎಲ್ಲಾ ಸಂಘ ಸಂಸ್ಥೆಗಳು ಅಧಿಕಾರಿಗಳು ಸಾರ್ವಜನಿಕರು ಬಸವೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕೋರಿದರು
ಈ ಸಂದರ್ಭದಲ್ಲಿ ತಹಶೀಲ್ದಾರ್ ಎಂ ವಿ ರೂಪ ತಾ ಪಂ ಇ ಒ ವಿ ಕೃಷ್ಣಪ್ಪ ಯೋಜನಾ ಪ್ರಾಧಿಕಾರ ಅಧ್ಯಕ್ಷ ಎಚ್ ಎಂ ವಿಜಯನರಸಿಂಹ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ ಕೃಷ್ಣಪ್ಪ ಎಂ ರಾಮಮೂರ್ತಿ ಬೆಳ್ಳಾವಿ ಸಂಸ್ಥಾನ ಮಠದ ಮಹಾಂತಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ಅಖಿಲ ಭಾರತ ವೀರಶೈವ ಸಮಾಜದ ಅಧ್ಯಕ್ಷ ಶಿವಶಂಕ್ರಪ್ಪ ಪ್ರಧಾನ ಕಾರ್ಯದರ್ಶಿ ಶಶಿಧರ್ ಲಿಂಗೇಶ್ವರಯ್ಯ ರೇಣುಕಾ ಪ್ರಸಾದ್ ಯೋಗೇಶ್ ಉದಯ್ ಚನ್ನವೀರ ದೇವರು ನಂಜುಂಡಪ್ಪ ಹಾಜರಿದ್ದರು
























