
ಬೆಂಗಳೂರು, ಏ. ೧೬-ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿ ರಾಷ್ಟ್ರೀಯ ಜನಗಣತಿ-೨೦೨೭ರ ಮೊದಲ ಹಂತವಾದ ಮನೆ-ಮನೆಗೆ ಭೇಟಿ ನೀಡಿ ಮನೆಪಟ್ಟಿ ಸಿದ್ಧಪಡಿಸುವ ಕಾರ್ಯ ಏಪ್ರಿಲ್ ೧೬ರಿಂದ ಆರಂಭವಾಗಲಿದೆ.
ಈ ಮಹತ್ವದ ಕಾರ್ಯಕ್ಕಾಗಿ ಜಿಬಿಎ ಐದು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಒಟ್ಟು ೨೬,೬೧೬ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇದರಲ್ಲಿ ೨೩,೭೦೫ ಗಣತಿದಾರರು (ಇಟಿumeಡಿಚಿಣoಡಿs) ಹಾಗೂ ೨,೯೧೨ ಮೇಲ್ವಿಚಾರಕರು (Suಠಿeಡಿvisoಡಿs) ಭಾಗವಹಿಸಲಿದ್ದಾರೆ ಎಂದು ಜಿಬಿಎ ಆಯುಕ್ತ ಮಹೇಶ್ವರ್ ರಾವ್ ತಿಳಿಸಿದ್ದಾರೆ.
ನಗರದ ಎಲ್ಲಾ ಮನೆಗಳಿಗೆ ಭೇಟಿ ನೀಡಿ ಸಮಗ್ರ ಮತ್ತು ನಿಖರ ಮಾಹಿತಿಯನ್ನು ಸಂಗ್ರಹಿಸುವ ಉದ್ದೇಶದಿಂದ ಸಾವಿರಾರು ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ ಎಂದು ತಿಳಿಸಿದರು.
ನಗರ ಪಾಲಿಕೆವಾರು ಸಿಬ್ಬಂದಿ ಹಂಚಿಕೆ:
ಬೆಂಗಳೂರು ಉತ್ತರ ನಗರ ಪಾಲಿಕೆ ೪,೪೯೭
ಬೆಂಗಳೂರು ಪಶ್ಚಿಮ ನಗರ ಪಾಲಿಕೆ ೬,೬೫೩
ಬೆಂಗಳೂರು ಪೂರ್ವ ನಗರ ಪಾಲಿಕೆ ೩,೪೧೯
ಬೆಂಗಳೂರು ಕೇಂದ್ರ ನಗರ ಪಾಲಿಕೆ ೪,೦೬೮
ಬೆಂಗಳೂರು ದಕ್ಷಿಣ ನಗರ ಪಾಲಿಕೆ ೫,೦೬೮
ಒಟ್ಟು ೨೩,೭೦೫ ಗಣತಿದಾರರನ್ನು ನಿಯೋಜಿಸಲಾಗಿದ್ದು, ಮೇಲ್ವಿಚಾರಕರನ್ನು ಸೇರಿಸಿ ಒಟ್ಟು ಸಿಬ್ಬಂದಿ ಸಂಖ್ಯೆ ೨೬,೬೧೬ಕ್ಕೆ ತಲುಪಿದೆ.
ಜನಗಣತಿ ಕಾರ್ಯ ಯಶಸ್ವಿಯಾಗಲು ನಾಗರಿಕರು ಸಹಕರಿಸುವಂತೆ ಮನವಿ ಮಾಡಿದರು. ಅಗತ್ಯ ಮಾಹಿತಿಯನ್ನು ನಿಖರವಾಗಿ ನೀಡುವುದು ಪ್ರತಿಯೊಬ್ಬರ ರಾಷ್ಟ್ರೀಯ ಕರ್ತವ್ಯವಾಗಿದ್ದು, ಜನಗಣತಿ ಕಾಯ್ದೆ ೧೯೪೮ರ ಪ್ರಕಾರ ಮಾಹಿತಿ ನೀಡುವುದು ಕಡ್ಡಾಯವಾಗಿದೆ.
ಮಾಹಿತಿ ನೀಡಲು ನಿರಾಕರಿಸಿದರೆ ಅಥವಾ ಸಿಬ್ಬಂದಿಗೆ ಅಸಹಕಾರ ತೋರಿದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು

























