Home ಜಿಲ್ಲೆ ಮೈಸೂರು ಡಾ. ಬಿ.ಆರ್ ಅಂಬೇಡ್ಕರ್ ಹಾಗೂ ಡಾ. ಬಾಬು ಜಗಜೀವನ್‍ರಾಂ ಜಯಂತಿ ಕಾರ್ಯಕ್ರಮ

ಡಾ. ಬಿ.ಆರ್ ಅಂಬೇಡ್ಕರ್ ಹಾಗೂ ಡಾ. ಬಾಬು ಜಗಜೀವನ್‍ರಾಂ ಜಯಂತಿ ಕಾರ್ಯಕ್ರಮ

ಸಂಜೆವಾಣಿ ವಾರ್ತೆ
ಮಳವಳ್ಳಿ.ಏ.16:-
ಮಳವಳ್ಳಿಯಲ್ಲಿ ಅದ್ದೂರಿಯಾಗಿ ಜರುಗಿದ ಡಾ.ಅಂಬೇಡ್ಕರ್ ಮತ್ತು ಬಾಬು ಜಗಜೀವನ್ ರಾಮ್ ರವರ ಜಯಂತಿ ಅಂಗವಾಗಿ ಪಟ್ಟಣದಲ್ಲಿ ಮೆರವಣಿಗೆ. ಅಶೋಕ್ ನಗರ ಮಳವಳ್ಳಿ ಶ್ರೀ ರಾಮಾಂಜನೇಯ ದೇವಸ್ಥಾನ ಜೀರ್ಣೋದ್ಧಾರ ಮತ್ತು ಸಾಂಸ್ಕೃತಿಕ, ಸಾಮಾಜಿಕ ಸೇವಾ ಟ್ರಸ್ಟ್ (ರಿ) ವತಿಯಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿವಿಧ ಕಲಾತಂಡಗಳ ಜೊತೆ ಬೆಳ್ಳಿ ರಥದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಡಾ. ಬಾಬು ಜಗಜೀವನ್ ರಾಮ್ ರವರ ಭಾವಚಿತ್ರಗಳನ್ನು ಮೆರಣಿಗೆ ಮಾಡಲಾಯಿತು.


ಪಟ್ಟಣದ ಅಶೋಕ್‍ನಗರ ದಲ್ಲಿ ನಡೆದ ಡಾ. ಬಿ.ಆರ್ ಅಂಬೇಡ್ಕರ್ ಹಾಗೂ ಡಾ. ಬಾಬು ಜಗಜೀವನ್‍ರಾಂ ಜಯಂತಿ ಕಾರ್ಯಕ್ರಮದ ಅಂಗವಾಗಿ ನಡೆದ ಮಹಾನೀಯರ ಭಾವಚಿತ್ರ ಮೆರವಣಿಗೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಮಾಜಿ ಉಪಪ್ರಧಾನಿ ಹಾಗೂ ಶೋಷಿತ ವರ್ಗಗಳ ಧ್ವನಿಯಾಗುವುದರ ಜೊತೆಗೆ ಕೃಷಿ ಸಚಿವರಾಗಿದ್ದ ಕಾಲದಲ್ಲಿ ಭಾರತವು ಆಹಾರ ಧಾನ್ಯಗಳ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸುವಲ್ಲಿ ಯಶಸ್ವಿಯಾಗಿ ದೀನದಲಿತರ ಮತ್ತು ಕಾರ್ಮಿಕರ ಹಕ್ಕುಗಳಿಗಾಗಿ ಹೋರಾಟ ಮಾಡಿದ ಮಹಾಪುರುಷರಾಗಿದ್ದಾರೆಂದು ಸ್ಮರಿಸಿದರು.
ಜಾತಿ ಪದ್ಧತಿ ಮತ್ತು ಅಸ್ಪೃಶ್ಯತೆಯ ವಿರುದ್ಧ ಹೋರಾಡಿ, ಪ್ರತಿಯೊಬ್ಬರಿಗೂ ಸಮಾನ ಹಕ್ಕುಗಳನ್ನು ಒದಗಿಸಿಕೊಟ್ಟ ಮಹಾನ್ ನಾಯಕ ಡಾ. ಬಿ.ಆರ್ ಅಂಬೇಡ್ಕರ್ ವಿಶ್ವದಲ್ಲಿಯೇ ಜ್ಞಾನದ ಸಂಕೇತವಾಗಿದ್ದಾರೆ. ಸಂವಿಧಾನ ಶಿಲ್ಪಿಯಷ್ಟೇ ಅಲ್ಲದೆ, ಪ್ರಖ್ಯಾತ ಅರ್ಥಶಾಸ್ತ್ರಜ್ಞ, ನ್ಯಾಯಶಾಸ್ತ್ರಜ್ಞ ಮತ್ತು ಸಮಾಜ ಸುಧಾರಕರಾಗಿದ್ದರು ಎನ್ನುವುದನ್ನು ಅರಿಯಬೇಕಿದೆ. ಮಹಾನ್ ನಾಯಕರು ನಮ್ಮ ಜೊತೆಗೆ ದೈಹಿಕವಾಗಿ ಇಲ್ಲದಿದ್ದರೂ ಅವರ ಸಾಧನೆಗಳೊಂದಿಗೆ ಮಾನಸಿಕವಾಗಿ ಸದಾ ನಮ್ಮಜೊತೆ ಇರುತ್ತಾರೆಂದು ಹೇಳಿದರು.


ಜಾನಪದ ಕಲಾ ಮೇಳದೊಂದಿಗೆ ಡಾ. ಬಿ.ಆರ್ ಅಂಬೇಡ್ಕರ್ ಹಾಗೂ ಡಾ. ಬಾಬುಜಗಜೀವನ್‍ರಾಂವರ ಭಾವಚಿತ್ರ ಮೆರವಣಿಗೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಯಿತು. ಪ್ರವಾಸಿ ಮಂದಿರದ ಮುಂಭಾಗವಿರುವ ಡಾ. ಬಿ.ಆರ್ ಅಂಬೇಡ್ಕರ್ ಪ್ರತಿಮೆಗೆ ಗಣ್ಯರು ಪುಷ್ಪನಮನ ಸಲ್ಲಿಸಿದರು. ಜಯಂತಿ ಅಂಗವಾಗಿ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು. ಅಶೋಕ್ ನಗರದ ಯಜಮಾನ. ಮುಖಂಡರುಗಳು ಹಾಗೂ ಸಂಘ ಸಂಸ್ಥೆ ಮಹಿಳೆಯರು ಪಾಲ್ಗೊಂಡಿದರು