
ರಬಕವಿ-ಬನಹಟ್ಟಿ ಏ.26: ತಾಲೂಕಿನ ಮಾರಾಪುರ ಗ್ರಾಮದ ವ್ಯಾಪ್ತಿಯ ಘಟಪ್ರಭಾ ನದಿ ಪಾತ್ರದಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಸಾಗಾಣಿಕೆ ವಿರುದ್ಧ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಮಹತ್ವದ ದಾಳಿ ನಡೆಸಿದ್ದಾರೆ.
ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳ ತಂಡವು ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಎರಡು ವಾಹನಗಳನ್ನು ಜಪ್ತಿ ಮಾಡಿದೆ.
ನಿಯಮಬಾಹಿರವಾಗಿ ಮರಳು ಸಾಗಣೆ ಮಾಡುತ್ತಿದ್ದ ಹಿನ್ನೆಲೆ ಒಟ್ಟು ?1,01,560 (ಒಂದು ಲಕ್ಷದ ಒಂದು ಸಾವಿರ ಐದು ನೂರು ಅರವತ್ತು ರೂಪಾಯಿ) ದಂಡ ವಿಧಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದ್ದು, ಆರೋಪಿಗಳ ವಿರುದ್ಧ ಬಿ.ಎನ್.ಎಸ್.ಎಸ್. (ಃಓSS) ಕಲಂ 223, ಎಂ.ಎಂ.ಆರ್.ಡಿ. (ಒಒಖಆ) ಕಾಯ್ದೆ 1957 ಹಾಗೂ ಕೆ.ಎಂ.ಎಂ.ಸಿ.ಆರ್. (ಏಒಒಅಖ) ನಿಯಮಗಳಡಿ ಮಾನ್ಯ ಜೆ.ಎಂ.ಎಫ್.ಸಿ. (ಎಒಈಅ) ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲು ಕ್ರಮ ಕೈಗೊಳ್ಳಲಾಗಿದೆ.
ನದಿ ಮೂಲಗಳಿಂದ ನೈಸರ್ಗಿಕ ಸಂಪನ್ಮೂಲಗಳ ಲೂಟಿಯನ್ನು ತಡೆಯಲು ಕಂದಾಯ ಮತ್ತು ಗಣಿ ಇಲಾಖೆ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಅಕ್ರಮ ಗಣಿಗಾರಿಕೆ ಮತ್ತು ಮರಳು ಸಾಗಾಣಿಕೆಯಲ್ಲಿ ತೊಡಗುವವರ ವಿರುದ್ಧ ಮುಂದಿನ ದಿನಗಳಲ್ಲೂ ಇಂತಹ ದಾಳಿಗಳು ಮುಂದುವರಿಯಲಿವೆ ಎಂದು ಎಚ್ಚರಿಸಿದ್ದಾರೆ.






















