
ಪರಂ ತಿರುಗೇಟು
ಬೆಂಗಳೂರು, ಏ. ೨೭- ಸಚಿವ ಸುಧಾಕರ್ ಆರೋಗ್ಯಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ನೀಡಿರುವ ವಿವಾದಾತ್ಮಕ ಹೇಳಿಕೆಗೆ ಗರಂ ಆಗಿ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ. ಪರಮೇಶ್ವರ್, ಇಂತಹ ವಿಚಾರದಲ್ಲಿ ಮಾನವೀಯತೆ ತೋರಬೇಕು ಎಂದಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಸುಧಾಕರ್ ಅವರ ಆರೋಗ್ಯ ವಿಚಾರದಲ್ಲಿ ಮಾಹಿತಿಗಳನ್ನು ಮುಚ್ಚಿ ಹಾಕಲಾಗಿದೆ. ಹೆಬ್ಬೆಟ್ಟು ಹಾಕಿಸಿಕೊಳ್ಳಲು ಈ ರೀತಿ ಮಾಡಲಾಗುತ್ತಿದೆ ಎಂದು ಹೇಳಿರುವುದಕ್ಕೆ ಆಕ್ರೋಶ ಹೊರ ಹಾಕಿದ ಅವರು, ಯಾರು ಹೆಬ್ಬೆಟ್ಟು ಹಾಕಿಸಿಕೊಳ್ಳಲು ಆಗುತ್ತದೆ. ಅವರ ಕುಟುಂಬದವರು ಮಾಡಬೇಕು ಅಷ್ಟೇ ಬೇರೆಯವರು ಯಾರು ಮಾಡುತ್ತಾರೆ ಸರ್ಕಾರ ಅವರಿಂದ ಹೆಬ್ಬೆಟ್ಟು ಒತ್ತಿಸಿಕೊಳ್ಳುತ್ತಾ ಎಂದು ಪ್ರಶ್ನಿಸಿದರು.
ಸಚಿವ ಸುಧಾಕರ್ ಐಸಿಯುನಲ್ಲಿದ್ದಾರೆ. ಮಾನವೀಯತೆಯಿಂದ ಮಾತನಾಡಬೇಕು ಎಂದು ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದರು.
ಅಧಿಕಾರ ಹಂಚಿಕೆ ಪೈಟ್ಟಿಂಗ್ ಬೆಳವಣಿಗೆ ಬಗ್ಗೆ ಕೇಳಲಾದ ಪ್ರಶ್ನೆಗೆ, ಮಾಡೋದೆ ರಾಜಕೀಯ ಇದರಲ್ಲಿ ಬೆಳವಣಿಗೆ ಏನು. ರಾಜಕಾರಣ ಅಂತ ಅದಕ್ಕೆ ಎಲ್ಲ ಹೇಳೋದು ಪ್ರತ್ಯೇಕವಾಗಿ ರಾಜಕೀಯ ಅಂತ ಏನಿಲ್ಲ. ನಾನು ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ, ಅವರೊಂದಿಗೆ ಊಟ ಮಾಡಿ ಬಂದಿದ್ದೇನೆ ಅಷ್ಟೇ ಎಂದರು.
ಮಾತು ಕತೆ ಆಗಿರುವುದೆಲ್ಲಾ ಚಾಲ್ತಿಗೆ ಬರುತ್ತದೆ ಎಂಬ ಉಪಮುಖ್ಯಮಂತ್ರಿಗಳ ಹೇಳಿಕೆಗೆ ನಾನು ವ್ಯಾಖ್ಯಾನ ಮಾಡುವ ಅಗತ್ಯವಿಲ್ಲ ಎಂದರು.
ಮಂಗಳೂರು ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪು ಬಂದ ಮೇಲೆ ಕಾನೂನು ಪ್ರಕಾರವಾಗಿ ಏನು ಮಾಡಬೇಕು ಆ ಕ್ರಮವನ್ನು ಕೈಗೊಳುತ್ತೇವೆ ಎಂಗು ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಹೇಳಿದರು

























