Home ಮುಖಪುಟ ಸುದ್ದಿ ಜಾಮೀನು ಕೋರಿ ನಟ ದರ್ಶನ್ ಸುಪ್ರೀಂಗೆ ಮೊರೆ

ಜಾಮೀನು ಕೋರಿ ನಟ ದರ್ಶನ್ ಸುಪ್ರೀಂಗೆ ಮೊರೆ

ಬೆಂಗಳೂರು,ಏ.೨೯- ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಜಾಮೀನು ಕೋರಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಸಾಕ್ಷ್ಯ ವಿಚಾರಣೆ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಜಾಮೀನು ಕೋರಿ ನಟ ದರ್ಶನ್ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.ಕಳೆದ ಏ.೧೪ ರಂದೇ ನಟ ದರ್ಶನ್ ಅವರು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.


ಸಾಕ್ಷಿಗಳ ವಿಚಾರಣೆ ಪ್ರಕ್ರಿಯೆ ವಿಳಂಬವಾಗುತ್ತಿದೆ ಎಂಬ ಕಾರಣವನ್ನು ಮುಂದಿಟ್ಟುಕೊಂಡು ಈ ಬಾರಿ ಸುಪ್ರೀಂ ಕೋರ್ಟ್‌ನಲ್ಲಿ ಜಾಮೀನು ಕೋರಲಾಗಿದೆ. ಕಳೆದ ಏಪ್ರಿಲ್ ೧೪ ರಂದೇ ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಕೆಯಾಗಿದೆ.


ಈ ಹಿಂದೆ ಕರ್ನಾಟಕ ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿ ತಿರಸ್ಕೃತಗೊಂಡಿದ್ದರಿಂದ, ಇದೀಗ ದೇಶದ ಅತ್ಯುನ್ನತ ನ್ಯಾಯಾಲಯದ ಮೊರೆ ಹೋಗಿದ್ದಾರೆ.


ಮುಂದಿನ ಹಂತವೇನು?
ಸಾಮಾನ್ಯವಾಗಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆಯಾದ ನಂತರ, ಅದು ವಿಚಾರಣೆಗೆ ಪಟ್ಟಿಯಾಗಲು ಕೆಲವು ದಿನಗಳ ಸಮಯ ತೆಗೆದುಕೊಳ್ಳುತ್ತದೆ. ನ್ಯಾಯಪೀಠವು ಈ ಅರ್ಜಿಯನ್ನು ಕೈಗೆತ್ತಿಕೊಂಡಾಗ, ತನಿಖಾ ಸಂಸ್ಥೆಗಳಿಗೆ ನೋಟಿಸ್ ನೀಡಿ ಅವರ ಅಭಿಪ್ರಾಯವನ್ನೂ ಕೇಳುವ ಸಾಧ್ಯತೆಯಿದೆ.