
ಚನ್ನಮ್ಮನ ಕಿತ್ತೂರು,ಏ.೨೯: ಸರ್ಕಾರದ ಗ್ಯಾರಂಟಿ ಯೋಜನೆಗಳು ಪ್ರತಿಯೊಬ್ಬ ಫಲಾನುಭವಿಗಳಿಗೆ ಸಮಯಕ್ಕೆ ಸರಿಯಾಗಿ ಸೌಲಭ್ಯಗಳು ದೊರಕುವಂತೆ ಮಾಡಲು ಕ್ಷೇತ್ರ ಮಟ್ಟದ ಅಧಿಕಾರಿಗಳು ಹೆಚ್ಚು ಚುರುಕಾಗಿ ಕಾರ್ಯನಿರ್ವಹಿಸಬೇಕೆಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ನಿಂಗಪ್ಪ ಮಸಳಿ ಖಡಕ್ಕಾಗಿ ಎಚ್ಚರಿಕೆ ನೀಡಿದರು.
ತಾಪಂ ಸಭಾಭವನದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ ಸರ್ಕಾರದ ಯೋಜನೆಗಳ ಪ್ರಯೋಜನಗಳು ಕಾಗದದಲ್ಲೇ ಉಳಿಯದೆ ನೈಜವಾಗಿ ಜನರಿಗೆ ತಲುಪಬೇಕು. ಈ ನಿಟ್ಟಿನಲ್ಲಿ ಅರ್ಜಿಗಳ ಸ್ವೀಕೃತಿ, ಪರಿಶೀಲನೆ ಮತ್ತು ಮಂಜೂರಾತಿ ಹಂತಗಳಲ್ಲಿ ವೇಗ ಹೆಚ್ಚಿಸುವುದು ಮುಖ್ಯವಾಗಿದೆ. ಯಾವುದೇ ಅರ್ಹ ವ್ಯಕ್ತಿ ಸೌಲಭ್ಯದಿಂದ ವಂಚಿತರಾಗದAತೆ ಅಧಿಕಾರಿಗಳು ಕಟ್ಟುನಿಟ್ಟಿನ ನಿಗಾ ವಹಿಸಬೇಕು. ಗ್ರಾಮ ಮಟ್ಟದಲ್ಲಿ ಜನರಿಂದ ಬರುತ್ತಿರುವ ಸಮಸ್ಯೆಗಳು ಹಾಗೂ ಅಸಮಾಧಾನಗಳನ್ನು ಗಂಭೀರವಾಗಿ ಪರಿಗಣಿಸಿ, ಸ್ಥಳದಲ್ಲಿಯೇ ಪರಿಹಾರ ಕಂಡುಹಿಡಿಯುವ ಮೂಲಕ ಆಡಳಿತದ ಮೇಲೆ ಜನರಲ್ಲಿ ನಂಬಿಕೆ ಮೂಡಿಸಬೇಕೆಂದರು.
ಗ್ಯಾರAಟಿ ಸಮಿತಿಯ ಅಧ್ಯಕ್ಷ ಗಂಗಪ್ಪ ಹುರಕಡ್ಲಿ ಮಾತನಾಡಿ, ಗ್ಯಾರಂಟಿ ಯೋಜನೆಗಳು ಜನಜೀವನಕ್ಕೆ ನೇರವಾಗಿ ಸ್ಪರ್ಶಿಸುವುದರಿಂದ ಅವುಗಳ ಅನು?Á್ಠನದಲ್ಲಿ ಯಾವುದೇ ನಿರ್ಲಕ್ಷ್ಯಕ್ಕೆ ಅವಕಾಶ ಇರಬಾರದು. ಪ್ರತಿಯೊಬ್ಬ ಅರ್ಹ ಫಲಾನುಭವಿಗೂ ಸಮರ್ಪಕವಾಗಿ ಸೌಲಭ್ಯ ತಲುಪುವಂತೆ ಎಲ್ಲಾ ಅಧಿಕಾರಿಗಳು ಒಗ್ಗಟ್ಟಿನಿಂದ ಕೆಲಸ ಮಾಡಬೇಕೆಂದರು.
ಸಭೆಯಲ್ಲಿ ತಾಪಂ ಸಹಾಯಕ ನಿರ್ದೇಶಕರು ಮಹಮ್ಮದ್ ಗೌಸ್ ರಿಸಲ್ದಾರ್, ವಿಜಯ್ ಪಾಟೀಲ್, ತಾಲೂಕ ಯೋಜನಾಧಿಕಾರಿ ಗೌಡಪ್ಪ ಗಿರಿಮಲ್ಲನವರ, ತಾಪಂ ಸಿಬ್ಬಂದಿ ಸಂಗನಗೌಡ ಹಂದ್ರಾಳ, ಲಿಂಗರಾಜ ಹಲಕರ್ಣಿಮಠ, ನಾಗಪ್ಪ ಕಳ್ಳಿಮನಿ, ಯಲ್ಲಪ್ಪ ಹುಲಿಮನಿ, ಮಡಿವಾಳಪ್ಪ ಚಿಣ್ಣನವರು ಸೇರಿದಂತೆ ಸಮಿತಿಯ ಸದಸ್ಯರು, ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿದ್ದರು.






















