
ಕರಜಗಿ : ಏ.29:ಅಫಜಲಪುರ ತಾಲೂಕಿನ ಕರಜಗಿ ಗ್ರಾಮ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ, “ಜೀರೋ ಕಾಸ್ಟ್ ಮಾದರಿಯಲ್ಲಿ ಹೊಸ ಪೆÇಲೀಸ್ ಠಾಣೆ ಸ್ಥಾಪಿಸುವಂತೆ ಶಾಸಕ ಎಂ.ವೈ.ಪಾಟೀಲ್ ಅವರು ರಾಜ್ಯ ಗೃಹಸಚಿವ ಜಿ.ಪರಮೇಶ್ವರ್ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.
ಕರಜಗಿ ಪ್ರದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಜನಸಂಖ್ಯೆ ವ್ಯಾಪಕ ಭೌಗೋಳಿಕ ವ್ಯಾಪ್ತಿ ಹಾಗೂ ಸಾರ್ವಜನಿಕರ ಭದ್ರತೆ ದೃಷ್ಟಿಯಿಂದ ಹೊಸ ಪೆÇಲೀಸ್ ಠಾಣೆಯ ಅಗತ್ಯತೆ ಅನಿವಾರ್ಯವಾಗಿದೆ ಎಂದು ಶಾಸಕರು ಮನವರಿಕೆ ಮಾಡಿದರು. ಈ ವಿಷಯವನ್ನು ಈಗಾಗಲೇ ವಿಧಾನಸಭೆ ಅಧಿವೇಶನದಲ್ಲಿಯೂ ಪ್ರಸ್ತಾಪಿಸಿರುವುದಾಗಿ ಸಚಿವರಿಗೆ ನೆನಪಿಸಿದರು.
ಕರಜಗಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ತ್ವರಿತ ಪೆÇಲೀಸ್ ಸೇವೆ ದೊರೆಯಲು, ಅಪರಾಧ ಪ್ರಕರಣಗಳ ನಿಯಂತ್ರಣ ಮತ್ತು ಪತ್ತೆ ಕಾರ್ಯಗಳಿಗೆ ವೇಗ ಸಿಗಲು, ವಿಶೇಷವಾಗಿ ಮಹಿಳೆಯರು ಹಾಗೂ ದುರ್ಬಲ ವರ್ಗಗಳ ಭದ್ರತೆ ಹೆಚ್ಚಲು ಈ ಪೆÇಲೀಸ್ ಠಾಣೆ ಮಹತ್ವದ ಪಾತ್ರ ವಹಿಸಲಿದೆ ಎಂದು ಶಾಸಕ ಎಂ.ವೈ ಪಾಟೀಲ್ ಹೇಳಿದರು.
ಜನರ ಸುರಕ್ಷತೆ ಮತ್ತು ಶಾಂತಿ ಕಾಪಾಡುವ ದೃಷ್ಟಿಯಿಂದ ಈ ಯೋಜನೆಗೆ ಶೀಘ್ರ ಅನುಮೋದನೆ ನೀಡುವಂತೆ ಗೃಹಸಚಿವರನ್ನು ಅವರು ಮನವಿ ಮಾಡಿದರು.






















