Home ಜಿಲ್ಲೆ ಬೆಂಗಳೂರು ಬೆಂಗಳೂರಿನ ಹಲವೆಡೆ ಆಲಿಕಲ್ಲು ಮಳೆ

ಬೆಂಗಳೂರಿನ ಹಲವೆಡೆ ಆಲಿಕಲ್ಲು ಮಳೆ

ಬೆಂಗಳೂರು, ಏ.‌29-ಬಿಸಿಲ ಝಳದಿಂದ ತತ್ತರಿಸಿದ್ದ ಬೆಂಗಳೂರಿನಲ್ಲಿ ಸಂಜೆ ಭಾರೀ ಗಾಳಿಯೊಂದಿಗೆ‌‌ ಆಲಿ ಕಲ್ಲು ಮಳೆ ಸುರಿದಿದೆ. ಇದರಿಂದಾಗಿ ಬಿಸಿಲ ಬೇಗೆಯಿಂದ ಬಸವಳಿದ ಜನತೆಗೆ ವರುಣ ತಂಪೆರದಿದ್ದಾನೆ.
ಸಂಜೆ ಸಹ ನಗರದ ಹೃದಯ ಭಾಗದಲ್ಲಿ ಭಾರೀ ಮಳೆಯಾಗಿದೆ. ಆದರೆ ಅನಿರೀಕ್ಷಿತ ಮಳೆಯಿಂದಾಗಿ ಅಲ್ಲಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಪರಿದಾಡುವಂತಾಯಿತು.


ಶಾಂತಿನಗರ, ಲಾಲ್ ಬಾಗ್, ವಿಲ್ಸನ್ ಗಾರ್ಡನ್, ಕಾರ್ಪೋರೇಶನ್, ಜಯನಗರ, ಚಿನ್ನಸ್ವಾಮಿ, ಮಹಾತ್ಮ ಗಾಂಧಿ ರಸ್ತೆ, ಹಲಸೂರು, ವಿಧಾನಸೌಧ, ಶಿವಾಜಿನಗರ, ರೇಸ್ ಕೋರ್ಸ್ ರಸ್ತೆ, ಮೆಜೆಸ್ಟಿಕ್, ಶಿವಾನಂದ ಸರ್ಕಲ್, ಮಲ್ಲೇಶ್ವರಂ, ಜಯನಗರ, ಜೆಪಿ ನಗರ, ಬಸವನಗುಡಿ ಮೊದಲಾದೆಡೆ ಗಾಳಿಯಿಂದ ಕೂಡಿದ ಆಲಿಕಲ್ಲು ಮಳೆ ಸುರಿಯಿತು.


ಯಲಹಂಕ, ವಿದ್ಯಾರಣ್ಯಪುರ, ಜಾಲಹಳ್ಳಿ ಸೇರಿದಂತೆ ಬಹುತೇಕ ಕಡೆ ಮೋಡ ಕವಿದ ವಾತಾವರಣವಿದ್ದು ಗುಡುಗು ಸಹಿತ ಮಳೆ ನಿರೀಕ್ಷಿಸಲಾಗಿದೆ. ಏಕಾಏಕಿ ಸುರಿದ ಮಳೆಯಿಂದಾಗಿ ನಗರದ ಕೆಲೆವೆಡೆ ವಾಹನ ಸಂಚಾರದಲ್ಲಿ ವ್ಯತ್ಯಯ ಆಯಿತು. ಹೀಗಾಗಿ ಸಂಜೆ ವೇಳೆ ಮನೆ ಕಡೆ ತೆರಳುತ್ತಿದ್ದವರು ಟ್ರಾಫಿಕ್ ನಲ್ಲಿ ಸಿಲುಕಿದ್ದ ದೃಶ್ಯ ಕಂಡು ಬಂತು.