
ಬೆಂಗಳೂರು, ಏ.29- ಬೆಂಗಳೂರಿನಲ್ಲಿ ಇಂದು ಸರಿದ ಇಂದು ಸಂಜೆ ಸುರಿದ ಧಾರಾಕಾರ ಮಳೆಯಿಂದಾಗಿ ಬೌರಿಂಗ್ ಆಸ್ಪತ್ರೆಯ ಗೋಡೆ ಕುಸಿದು ಏಳು ಮಂದಿ ದುರಂತ ಸಾವಿಗೀಡಾಗಿದ್ದಾರೆ. ಈ ಘೋರ ದುರಂತದಲ್ಲಿ ಮ ಈ ಮೂವರು ಮಕ್ಕಳು ಸೇರಿದ್ದಾರೆ.

ಏಕಾಏಕಿ ಗೋಡೆ ಕುಸಿಯುತ್ತಿದ್ದಂತೆ ಆತಂಕದ ವಾತಾವರಣ ನಿರ್ಮಾಣ ವಾಯಿತು. ಸಾರ್ವಜನಿಕರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದರಾದರೂ ಜನರ ಪ್ರಾಣಿ ಪಕ್ಷಿ ಹಾರಿಹೋಗಿತ್ತು. ಮೃತರೆಲ್ಲರೂ ಬೀದಿ ಬದಿಯ ವ್ಯಾಪಾರಿಗಳೆಂದು ಗುರುತಿಸಲಾಗಿದೆ. 50 ಮೀಟರ್ ಉದ್ದದ ಗೋಡೆ ಕುಸಿದು ಈ ಅವಘಡ ಸಂಭವಿಸಿದೆ.

ಸುದ್ದಿ ತಿಳಿಯುತ್ತಿದ್ದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಭೇಟಿ ನೀಡಿ ಪರಿಶೀಲಿಸಿದರು. ಪರಿಹಾರ ತಂಡ ಅವಶೇಷಗಳನ್ನು ತೆರವುಗೊಳಿಸಲಾಯಿತು.
ಹಳೆಯ ಗೋಡೆಗೆ ದೊಡ್ಡ ಟಾರ್ಪಲ್ ಹಾಕಿ ವ್ಯಾಪಾರ ಮಾಡುತ್ತಿದ್ದರು. ದಿಢೀರನೆ ಮಳೆ ಜೋರಾಗಿ ಸುರಿದ ಕಾರಣ ರಕ್ಷಣೆಗೆ ವ್ಯಾಪಾರಿಗಳು ಮತ್ತು ಪಾದಚಾರಿಗಳು ಟಾರ್ಪಲ್ ಆಡಿ ನಿಂತಿದ್ದಾರೆ. ಈ ವೇಳೆ ಬಿರುಗಾಳಿ ಸಹಿತ ಮಳೆಗೆ ಗೋಡೆ ಕುಸಿದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತಮ್ಮವರನ್ನು ಕಳೆದುಕೊಂಡ ಕುಟುಂಬಸ್ಥರ ರೋಧನ ಮುಗಿಲುಮುಟ್ಟಿದೆ.





















