
ಮಾಲೂರು ಮೇ೭: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಾಲೂರು ತಾಲೂಕು ಸಂಘದ ಪದಾಧಿಕಾರಿಗಳ ಹುದ್ದೆಗಳಿಗೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಮಂಗಳವಾರ ಅಧ್ಯಕ್ಷ ಉಪಾಧ್ಯಕ್ಷ ಖಜಾಂಚಿ ಸೇರಿದಂತೆ ೯ ಹುದ್ದೆಗಳಿಗೆ ಒಂದೊಂದು ನಾಮಪತ್ರಗಳನ್ನು ಸಲ್ಲಿಕೆ ಮಾಡಿದ್ದರಿಂದ ೯ ಹುದ್ದೆಗಳಿಗೆ ೯ ಮಂದಿ ನಾಮಪತ್ರಗಳನ್ನು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಚುನಾವಣಾಧಿಕಾರಿ ವೀರಭದ್ರಚಾರಿಯವರಿಗೆ ಸಲ್ಲಿಸಿದರು.
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ೧೪ ನಿರ್ದೇಶಕ ಸ್ಥಾನಗಳಿಗೆ ಈಗಾಗಲೇ ಚುನಾವಣೆ ನಡೆದಿದ್ದು, ಅಧ್ಯಕ್ಷ, ಉಪಾಧ್ಯಕ್ಷ ಸೇರಿದಂತೆ ೯ ಹುದ್ದೆಗಳಿಗೆ ಚುನಾವಣಾ ಅಧಿಕಾರಿಗಳು ಚುನಾವಣೆಯನ್ನು ನಿಗದಿಪಡಿಸಿ ಅದರಂತೆ ಸೋಮವಾರ ಮತ್ತು ಮಂಗಳವಾರ ನಾಮಪತ್ರ ಸಲ್ಲಿಕೆಗೆ ದಿನಾಂಕವನ್ನು ನಿಗದಿ ಪಡಿಸಿದ್ದರು. ಸೋಮವಾರ ಯಾವೊಬ್ಬ ನಿರ್ದೇಶಕರು ಸಂಘದ ಹುದ್ದೆಗಳಿಗೆ ನಾಮಪತ್ರ ಸಲ್ಲಿಕೆ ಮಾಡಿಲ್ಲ ಮಂಗಳವಾರ ಒಂದೊಂದು ಹುದ್ದೆಗೆ ಒಂದೊಂದು ನಾಮಪತ್ರವನ್ನು ಸಲ್ಲಿಕೆ ಮಾಡಿದರು. ಸಿಎಂ ನಾರಾಯಣಸ್ವಾಮಿ (ಅಧ್ಯಕ್ಷರು), ಜಿ ಮುನಿಯಪ್ಪ ಸಾಮಾನ್ಯ (ಉಪಾಧ್ಯಕ್ಷರು), ಮಹಿಳಾ ಮೀಸಲು ಉಪಾಧ್ಯಕ್ಷ ವೀ ಕಾಂತಮ್ಮ, ತಾಲೂಕು ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಕೆ, ಸಹ ಕಾರ್ಯದರ್ಶಿ ಶಶಿಧರ, ಟೇಕಲ್ ಮಹಿಳಾ ಸಂಘಟನಾ ಕಾರ್ಯದರ್ಶಿ ಕೆ ಚಂದ್ರಕಲಾ, ಖಜಾಂಚಿ ಸುರೇಶ್ ಎಚ್ ಇ, ಸಂಘಟನಾ ಕಾರ್ಯದರ್ಶಿ ಶ್ರೀನಾಥ್ ಪಿ, ಮಹಿಳಾ ಸಂಘಟನಾ ಕಾರ್ಯದರ್ಶಿ ಲಕ್ಷ್ಮಿ ಏನ್, ಸೇರಿದಂತೆ ೯ ಹುದ್ದೆಗಳಿಗೆ ೯ ಮಂದಿ ನಾಮಪತ್ರಗಳನ್ನು ಸಲ್ಲಿಕೆ ಮಾಡಿದರು, ಮೇ ೫ ನಾಮಪತ್ರ ಹಿಂಪಡೆಯಲು ಕಾಲಾವಕಾಶವಿದೆ ಮೇ ೬ ರಂದು ಚುನಾವಣಾ ಅಧಿಕಾರಿಗಳು ಘೋಷಣೆ ಮಾಡಲಿದ್ದಾರೆ.
ಸಂಘಕ್ಕೆ ಆಯ್ಕೆಯಾದ ಅಧ್ಯಕ್ಷ, ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ, ಖಜಾಂಚಿ, ಸಂಘಟನಾ ಕಾರ್ಯದರ್ಶಿ, ಸೇರಿದಂತೆ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ನೂತನ ಪದಾಧಿಕಾರಿಗಳನ್ನು ಅಭಿನಂದಿಸಿ ಮಾತನಾಡಿದ ಭಡ್ತಿ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಎಂ ಮುನಿನಾರಾಯಣ ನಮ್ಮ ಬಣದಿಂದ ತಾಲೂಕು ಕಾರ್ಯಕಾರಿ ಸಮಿತಿಗೆ ೧೪ ಮಂದಿಯನ್ನು ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸದಸ್ಯರು ಆಯ್ಕೆ ಮಾಡಿದ್ದು, ಎಲ್ಲಾ ಶಿಕ್ಷಕರಿಗೂ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದ ಅವರು ೧೪ ಮಂದಿಯು ಒಗ್ಗಟ್ಟಾಗಿದ್ದೇವೆ ಶಾಸಕ ಕೆ.ವೈ.ನಂಜೇಗೌಡ ಹಾಗೂ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ವಿ.ಮುನೇಗೌಡರ ಸಲಹೆ ಸೂಚನೆ ಮಾರ್ಗದರ್ಶನದಂತೆ ಕುಳಿತು ಚರ್ಚಿಸಿ ಸಂಘದ ೯ ಹುದ್ದೆಗಳಿಗೆ ೯ ನಾಮಪತ್ರಗಳನ್ನು ಸಲ್ಲಿಕೆ ಮಾಡಲು ತೀರ್ಮಾನಿಸಿ ೯ ಮಂದಿ ನಾಮಪತ್ರ ಸಲ್ಲಿಕೆ ಮಾಡಲು ಸೂಚಿಸಲಾಗಿತ್ತು,
ಅದರಂತೆ ನಾಮಪತ್ರ ಸಲ್ಲಿಕೆ ಮಾಡಿದ ೯ ಮಂದಿ ವಿವಿಧ ಹುದ್ದೆಗಳಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾ ಅಧಿಕಾರಿ ಘೋಷಣೆಯೊಂದೇ ಬಾಕಿ ಇದೆ ಎಂದರು.
ಸಂಘಕ್ಕೆ ನೂತನವಾಗಿ ಆಯ್ಕೆಯಾಗಿರುವ ಎಲ್ಲಾ ಪದಾಧಿಕಾರಿಗಳು ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಕಾಲಕಾಲಕ್ಕೆ ಸಂಘದ ಸಭೆ ಸಮಾರಂಭಗಳನ್ನು ಸಂಘವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಬೇಕು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಗೌರವ ಸಲ್ಲಿಸುವುದು ಇಲಾಖೆಯ ಕಾರ್ಯಕ್ರಮಗಳು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಲು ಕಾರ್ಯನಿರ್ವಹಿಸುದು, ಸಂಘವು ಹಿಂದೆಯಿಂದಲೂ ಪ್ರಾರಂಭಿಸಿರುವ ಕಾರ್ಯಕ್ರಮಗಳನ್ನು ಮುಂದುವರಿಸಿಕೊಂಡು ಹೋಗುವಂತೆ ಹೇಳಿದರು.
ಈ ಸಂದರ್ಭದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ನಂದೀಶ್, ನಾಗರಾಜ್, ಸರ್ಕಾರಿ ನೌಕರ ಸಂಘದ ಕಾರ್ಯದರ್ಶಿ ಎಂ ರವಿ, ಹಿರಿಯ ಶಿಕ್ಷಕರಾದ ವೆಂಕಟೇಶ್ ಗೌಡ, ಎಸ್ ಎನ್ ಮುನಿರಾಜು, ನಾಗರಾಜು, ಅಮರನಾಥ್, ಎಮ್ ಸುಬ್ರಮಣಿ, ಶ್ರೀನಿವಾಸ್, ವೈವಿ ವೆಂಕಟೇಶ್, ಮುರುಗೇಂದ್ರ, ಇನ್ನಿತರರು ಹಾಜರಿದ್ದರು.



















