Home ಜಿಲ್ಲೆ ಮೇ.10 ರಂದು ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತ್ಯುತ್ಸವ

ಮೇ.10 ರಂದು ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತ್ಯುತ್ಸವ

ಬೀದರ, ಮೇ.07- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಬೀದರ ಇವರ ಸಂಯುಕ್ತಾಶ್ರಯದಲ್ಲಿ ದಿನಾಂಕ: 10-05-2026 ರಂದು ಮಧ್ಯಾಹ್ನ 12 ಗಂಟೆಗೆ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಸಮುದಾಯ ಭವನ ಅಮಲಾಪೂರ ರಸ್ತೆ, ಬೀದರದಲ್ಲಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತ್ಯುತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ.
ಕಾರ್ಯಕ್ರಮ ಉದ್ಘಾಟನೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಮಾಡಲಿದ್ದಾರೆ.
ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಂ ಖಾನ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೀದರ ಲೋಕಸಭಾ ಸದಸ್ಯರಾದ ಸಾಗರ ಈಶ್ವರ ಖಂಡ್ರೆ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಾಲಾ ನಾರಾಯಣರಾವ್, ಔರಾದ(ಬಿ) ಶಾಸಕ ಪ್ರಭು ಬಿ.ಚವ್ಹಾಣ್, ಬಸವಕಲ್ಯಾಣ ಶಾಸಕ ಶರಣು ಸಲಗರ, ಬೀದರ ದಕ್ಷಿಣ ಶಾಸಕ ಡಾ.ಶೈಲೇಂದ್ರ ಕೆ.ಬೆಲ್ದಾಳೆ, ಹುಮನಾಬಾದ ಶಾಸಕ ಡಾ.ಸಿದ್ದು ಪಾಟೀಲ, ವಿಧಾನ ಪರಿಷತ್ ಶಾಸಕರುಗಳಾದ ಡಾ.ಚಂದ್ರಶೇಖರ ಬಿ.ಪಾಟೀಲ್, ಶಶೀಲ ಜಿ.ನಮೋಶಿ, ಭೀಮರಾವ ಪಾಟೀಲ್, ಡಾ.ಎಂ.ಜಿ.ಮೂಳೆ ಹಾಗೂ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ, ಕೃಷ್ಣಾ ಮೇಲ್ದಂಡೆ ಯೋಜನೆ (ಕಾಡಾ) ಭೀಮರಾಯನಗುಡಿ ಕಲಬುರಗಿಯ ಅಧ್ಯಕ್ಷ ಬಾಬು ಹೊನ್ನನಾಯ್ಕ, ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಅವರುಗಳು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಅತಿಥಿ ಉಪನ್ಯಾಸವನ್ನು ಬೀದರ ಅಕ್ಕಮಹಾದೇವಿ ಮಹಾವಿದ್ಯಾಲಯದ ರಸಾಯನಶಾಸ್ತ್ರ ವಿಭಾಗದ ಹಿರಿಯ ಉಪನ್ಯಾಸಕರಾದ ಶಿವಶರಣಪ್ಪಾ ಹುಗ್ಗಿ ಪಾಟೀಲ ಅವರು ನೀಡಲಿದ್ದಾರೆ.