
ಕಲಬುರಗಿ :ಮೇ.8: ರೆಡ್ ಕ್ರಾಸ್ ಸಂಸ್ಥೆಯು ನೊಂದವರ ನೋವಿಗೆ ಸ್ಪಂದಿಸುವ, ಜೀವ ರಕ್ಷಿಸುವ ಮತ್ತು ಶಾಂತಿಯನ್ನು ಉತ್ತೇಜಿಸುವ ಜಾಗತಿಕ ಸಂಸ್ಥೆ ರೆಡ್ ಕ್ರಾಸ್ ಕೊಡುಗೆ ಅನನ್ಯವಾಗಿದೆ ಎಂದು ಉಪನ್ಯಾಸಕ ಎಚ್.ಬಿ.ಪಾಟೀಲ ಹೇಳಿದರು.
ನಗರದ ಆಳಂದ ರಸ್ತೆಯ ಶಿವ ನಗರದಲ್ಲಿನ ‘ಜ್ಞಾನ ಚಿಗುರು ಟ್ಯುಟೋರಿಯಲ್ಸ್’ನಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಜರುಗಿದ “ವಿಶ್ವ ರೆಡ್ ಕ್ರಾಸ್ ದಿನಾಚರಣೆ”ಯಲ್ಲಿ ಅವರು ಮಾತನಾಡುತ್ತಿದ್ದರು.
ರೆಡ್ಕ್ರಾಸ್ ಮಾನವೀಯ ಸೇವೆಗಳಲ್ಲಿ, ವಿಶೇಷವಾಗಿ ಯುದ್ಧ ಮತ್ತು ವಿಪತ್ತುಗಳು, ಪ್ರವಾಹ, ಭೂಕಂಪ, ಬರಗಾಲ ಮತ್ತು ಸಾಂಕ್ರಾಮಿಕ ರೋಗಗಳಂತಹ ನೈಸರ್ಗಿಕ ವಿಕೋಪಗಳ ಸಮಯದಲ್ಲಿ ಪರಿಹಾರ ಕಾರ್ಯಗಳನ್ನು ನಡೆಸುತ್ತದೆ. ರಕ್ತದಾನ ಮತ್ತು ಆರೋಗ್ಯ ಸೇವೆಗಳು ನೀಡುತ್ತದೆ. ಪ್ರಥಮ ಚಿಕಿತ್ಸಾ ತರಬೇತಿ, ಅಗತ್ಯವಿರುವವರಿಗೆ ಆಂಬ್ಯುಲೆನ್ಸ್ ಸೇವೆಗಳನ್ನು ಒದಗಿಸುವುದು, ಮಾನವೀಯ ಕಾನೂನುಗಳ ರಕ್ಷಣೆ, ಶಾಲೆ ಮತ್ತು ಕಾಲೇಜುಗಳಲ್ಲಿ ಕಿರಿಯ ರೆಡ್ಕ್ರಾಸ್ ಘಟಕಗಳ ಮೂಲಕ ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ನಾಯಕತ್ವ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸುವುದು, ಆರೋಗ್ಯ ಜಾಗೃತಿ, ಪರಿಸರ ಸಂರಕ್ಷಣೆ ಮತ್ತು ಡ್ರಗ್ಸ್ ಮುಕ್ತ ಸಮಾಜದ ಬಗ್ಗೆ ಜಾಗೃತಿ ಮೂಡಿಸುವುದು ಸೇರಿದಂತೆ ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಸಮಾಜ ಸೇವಕ ಶಿವಯೋಗೆಪ್ಪಾ ಎಸ್.ಬಿರಾದಾರ, ಮುಖ್ಯ ಶಿಕ್ಷಕಿ ಚಂಪಾಕಲಾ ನೆಲ್ಲುರೆ, ಶಿಕ್ಷಕಿ ರಾಣಿ ಬಂಗರಗಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.






















