ಕಲಬುರಗಿ: ಕೇಂದ್ರ ಸರ್ಕಾರದ ಪ್ರಜಾವಿರೋಧಿ ಕಾರ್ಮಿಕ ಸಂಹಿತೆಗಳನ್ನು ಹಿಂಪಡೆಯಲು ಆಗ್ರಹಿಸಿ ಸಿಐಟಿಯು ಜಿಲ್ಲಾ ಸಮಿತಿ ನಗರದ ಸರ್ದಾರ ವಲ್ಲಭಭಭಾಯಿ ಪಟೇಲ್ ವೃತ್ತದಲ್ಲಿ ನಿಯಮಾವಳಿಗಳ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿತು. ಎಂ.ಬಿ.ಸಜ್ಜನ್, ಶಾಂತಾ ಘಂಟಿ, ಗೌರಮ್ಮ ಪಾಟೀಲ, ಶ್ರೀಮಂತ ಬಿರಾದಾರ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.