
ಕಲಬುರಗಿ: ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸುವ ಆದೇಶ ಹಿಂಪಡೆಯುವ ಮೂಲಕ ಹೈಕೋರ್ಟ್ ಆದೇಶವನ್ನು ಕಾಂಗ್ರೆಸ್ ಸರ್ಕಾರ ಉಲ್ಲಂಘನೆ ಮಾಡಿದೆ ಎಂದು ಕೊಟ್ಟೂರು ಭಾರತೀಯ ಜನತಾ ಪಕ್ಷದ ಕೈಗಾರಿಕಾ ಪ್ರಕೋಷ್ಠ ಸಹ ಸಂಚಾಲಕರಾದ ಮಲ್ಲಿಕಾರ್ಜುನ ಮರತೂರಕರ್ ಅಸಮಾಧಾನ ವ್ಯಕ್ತಪಡಿಸಿದರು.
ಈ ಕುರಿತು ಪ್ರಕಟಣೆ ನೀಡಿರುವ ಅವರು,ಶಾಲಾ- ಕಾಲೇಜುಗಳಲ್ಲಿ ಸಮಾನ ಸಮವಸ್ತ್ರದ ವ್ಯವಸ್ಥೆ ಶಿಕ್ಷಣದ ಶಿಸ್ತು, ಏಕತೆ ಮತ್ತು ಸಮಾನತೆ ಕಾಪಾಡುವ ಮುಖ್ಯ ಅಂಶವಾಗಿದೆ. ಸರ್ಕಾರ ಹಿಜಾಬ್ ಧಾರಣೆಗೆ ಅನುಮತಿ ನೀಡಿರುವ ಕುರಿತು ಪೆÇೀಷಕರು, ಸಾರ್ವಜನಿಕ ವಲಯದಲ್ಲಿ ಆತಂಕ ವ್ಯಕ್ತವಾಗುತ್ತಿದೆ ಎಂದಿದ್ದಾರೆ.ಶೈಕ್ಷಣಿಕ ಸಂಸ್ಥೆಗಳು ಧರ್ಮ, ಜಾತಿ, ಭಾಷೆ ಮೀರಿ ವಿದ್ಯಾರ್ಥಿಗಳಲ್ಲಿ ಒಂದೇ ಗುರುತು ಮತ್ತು ಶಿಸ್ತಿನ ಮನೋಭಾವ ಬೆಳೆಸುವ ಸ್ಥಳವಾಗಿವೆ. ಧಾರ್ಮಿಕ ವೇಷ-ಭೂಷಣಗಳಿಗೆ ಪ್ರತ್ಯೇಕ ಅವಕಾಶ ನೀಡುವುದರಿಂದ ವಿದ್ಯಾರ್ಥಿಗಳ ನಡುವೆ ವಿಭಜನೆ ಭಾವನೆ ಮೂಡುವ ಸಾಧ್ಯತೆ ಇದೆ. ಇದರಿಂದ ಸಮವಸ್ತ್ರದ ಮೂಲ ಉದ್ದೇಶವೇ ದುರ್ಬಲವಾಗಬಹುದು ಎಂದು ತಿಳಿಸಿದ್ದಾರೆ.ಈ ವಿಚಾರ ಈಗ ನ್ಯಾಯಾಲಯದಲ್ಲಿರುವ ಸಂದರ್ಭದಲ್ಲಿ ಸರ್ಕಾರ ತುರ್ತು ನಿರ್ಧಾರ ಕೈಗೊಳ್ಳದೆ, ಶಿಕ್ಷಣದ ವಾತಾವರಣ, ವಿದ್ಯಾರ್ಥಿಗಳ ಮನೋಸ್ಥಿತಿ ಹಾಗೂ ಸಾಮಾಜಿಕ ಸಾಮರಸ್ಯಗಮನದಲ್ಲಿಟ್ಟುಕೊಂಡು ಸಮತೋಲನದ ನಿಲುವು ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.
ವಿದ್ಯಾರ್ಥಿಗಳಲ್ಲಿ ಸಹಬಾಳ್ವೆ, ಸಮಾನತ ಮೂಡಿಸುವ ಜವಾಬ್ದಾರಿ ಸರ್ಕಾರದ್ದು, ಇದಕ್ಕೆ ವ್ಯತಿರಿಕ್ತವಾಗಿ ಸರಕಾರ ವಿದ್ಯಾರ್ಥಿಗಳಲ್ಲಿ ಒಡಕು ಉಂಟು ಮಾಡಿ ಸಾಮರಸ್ಯ ಹಾಳು ಮಾಡಲು ಹೊರಟಿದೆ. ಎಲ್ಲಾ ವಿದ್ಯಾರ್ಥಿಗಳಿಗೆ ಒಂದೇ ನಿಯಮ ಅನ್ವಯಿಸುವ ಮೂಲಕ ಶಿಕ್ಷಣ ಸಂಸ್ಥೆಗಳ ಗೌರವ ಮತ್ತು ಏಕತೆಯನ್ನು ಕಾಪಾಡುವುದು ಅಗತ್ಯವಾಗಿದೆ ಎಂದಿದ್ದಾರೆ.
























