Home ಜಿಲ್ಲೆ ಮಂಗಳೂರು ಪಡುಬಿದ್ರಿ: ನೀರಿನ ಟ್ಯಾಂಕರ್ ಡಿಕ್ಕಿ; ಸ್ಕೂಟಿ ಸವಾರ ಸ್ಥಳದಲ್ಲೇ ಸಾವು

ಪಡುಬಿದ್ರಿ: ನೀರಿನ ಟ್ಯಾಂಕರ್ ಡಿಕ್ಕಿ; ಸ್ಕೂಟಿ ಸವಾರ ಸ್ಥಳದಲ್ಲೇ ಸಾವು

ಪಡುಬಿದ್ರಿ- ನೀರಿನ ಟ್ಯಾಂಕರ್ ಮತ್ತು ಸ್ಕೂಟಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಕೂಟಿ ಸವಾರನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ಮುಂಜಾನೆ ಪಣಿಯೂರಿನಲ್ಲಿ ನಡೆದಿದೆ.
ಮೃತರನ್ನು ಪಣಿಯೂರು ಸೆಂಟರ್ ನಿವಾಸಿ ಕೃಷ್ಣ ಮೂಲ್ಯ(೨೨) ಎಂದು ಗುರುತಿಸಲಾಗಿದೆ.
ಹಾಲು ಖರೀದಿಗಾಗಿ ಪಣಿಯೂರಿಗೆ ಬಂದಿದ್ದ ಕೃಷ್ಣ ಮೂಲ್ಯ ಅವರು ಮರಳಿ ಸ್ಕೂಟಿಯಲ್ಲಿ ಮನೆಗೆ ತೆರಳುತ್ತಿದ್ದ ವೇಳೆ, ಎದುರಿನಿಂದ ಸಾಗುತ್ತಿದ್ದ ನೀರಿನ ಟ್ಯಾಂಕರ್ ಕಂಚುಗಾರ ರಸ್ತೆಗೆ ತಿರುಗಲು ಬಲಬದಿಗೆ ತಿರುಗಿದ ಸಂದರ್ಭ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಡಿಕ್ಕಿಯ ರಭಸಕ್ಕೆ ಸ್ಕೂಟಿ ಸವಾರ ರಸ್ತೆಗೆ ಬಿದ್ದು ತಲೆಗೆ ಗಂಭೀರ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಸ್ಥಳೀಯರು ಉಚ್ಚಿಲದ ಎಸ್‌ಡಿಪಿಐ ಆಂಬುಲೆನ್ಸ್ ಮೂಲಕ ಜಲ್ಲು ಯಾನೆ ಜಲಾಲುದ್ದೀನ್ ನೇತೃತ್ವದಲ್ಲಿ ಅವರನ್ನು ಉಡುಪಿ ಜಿಲ್ಲಾಸ್ಪತ್ರೆಗೆ ಸಾಗಿಸಿದರೂ, ಅಷ್ಟರಲ್ಲಿ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.