
ಧಾರವಾಡ, ಮೇ 20: ಬರುವ ಜೂನ 28 ರಿಂದ ಜುಲೈ 1ರ ವರಗೆ ಜಿಲ್ಲೆಯಲ್ಲಿ ಹಮ್ಮಿಕೊಳ್ಳುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಬೇಕು. ಜಿರೋ ದಿಂದ ಐದು ವರ್ಷದೊಳಗಿನ ಯಾವ ಮಗುವು ಪೋಲಿಯೋ ಹನಿಯಿಂದ ಹೊರಗುಳಿಯದಂತೆ ಕ್ರಮವಹಿಸಬೇಕು ಈ ನಿಟ್ಟಿನಲ್ಲಿ ಸಮಗ್ರವಾದ ಮತ್ತು ಸಮರ್ಪಕವಾದ ಕ್ರೀಯಾ ಯೋಜನೆಯನ್ನು ಆರೋಗ್ಯ ಇಲಾಖೆಯ ಅಧಿಕಾರಿಗಳು ರೂಪಿಸಬೇಕೆಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್ ಅವರು ಹೇಳಿದರು.
ಅವರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಅಂತರ್ ಇಲಾಖಾ ಸಮನ್ವಯ ಸಮಿತಿಯ ಜಿಲ್ಲಾ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಹಾಗೂ ರಾಷ್ಟ್ರೀಯ ಪಲ್ಸ ಪೆÇೀಲಿಯೋ ಕಾರ್ಯಕ್ರಮದ ಯಶಸ್ವಿ ಅನುμÁ್ಠನ ಕುರಿತು ಜರುಗಿದ ಪೂರ್ವಭಾವಿ ಸಭೆ ಜರುಗಿಸಿ ಮಾತನಾಡಿದರು.
ಜಿಲ್ಲೆಯಾದ್ಯಂತ 0-5 ವರ್ಷದ ಮಕ್ಕಳಿಗೆ ಪಲ್ಸ್ ಪೆÇೀಲಿಯೋ ಲಸಿಕಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಬೇಕು. ಜೂನ್ 28 ರಿಂದ ಜುಲೈ 1 ರವರೆಗೆ ಜಿಲ್ಲೆಯ ವಿವಿಧ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಲಸಿಕಾ ಕಾರ್ಯ ನಡೆಯಲಿದೆ ಎಂದು ಅವರು ಹೇಳಿದರು.
ಜೂನ್ 28ರಂದು ಬೂತ್ ಮಟ್ಟದಲ್ಲಿ ಹಾಗೂ ಜೂನ್ 29 ಮತ್ತು 30ರಂದು ಎರಡು ದಿನಗಳ ಕಾಲ ಗ್ರಾಮೀಣ ಪ್ರದೇಶಗಳಲ್ಲಿ ಹಾಗೂ ಜೂನ್ 29ರಿಂದ ಜುಲೈ 1ರವರೆಗೆ ಮೂರು ದಿನಗಳ ಕಾಲ ನಗರ ಪ್ರದೇಶಗಳಲ್ಲಿ ಮನೆ ಮನೆಗೆ ಭೇಟಿ ನೀಡಿ ಆರೋಗ್ಯ ಕಾರ್ಯಕರ್ತರು 0-5 ವರ್ಷದ ಮಕ್ಕಳಿಗೆ ಪೆÇೀಲಿಯೋ ಲಸಿಕೆ ನೀಡಲಿದ್ದಾರೆ. ಸಾರ್ವಜನಿಕರು ತಮ್ಮ ಮಕ್ಕಳಿಗೆ ತಪ್ಪದೇ ಪೆÇೀಲಿಯೋ ಹನಿ ಹಾಕಿಸಬೇಕು ಎಂದು ಅವರು ಹೇಳಿದರು.
ಜಿಲ್ಲೆಯಲ್ಲಿ 5 ವರ್ಷದೊಳಗಿನ ಮಕ್ಕಳ ಸಂಖ್ಯೆ 2,07,837 ಇದ್ದು, 891 ಒಟ್ಟು ಲಸಿಕಾ ಕೇಂದ್ರಗಳು ಸ್ಥಾಪಿಸಲಾಗುತ್ತದೆ. 92 ಟ್ರಾಂಜಿಟ್ ತಂಡಗಳು, 57 ಮೊಬೈಲ್ ತಂಡಗಳು ಕಾರ್ಯನಿರ್ವಹಿಸಲಿವೆ. ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ 3,829 ವ್ಯಾಕ್ಸಿನೇಟರ್ಗಳು ಹಾಗೂ 214 ಮೇಲ್ವಿಚಾರಕರು ಭಾಗವಹಿಸಲಿದ್ದಾರೆ. ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ ಒಟ್ಟು 4,28,540 ಮನೆಗಳಿಗೆ ಆರೋಗ್ಯ ಕಾರ್ಯಕರ್ತರು ಭೇಟಿ ನೀಡಲಿದ್ದಾರೆ ಎಂದು ಅವರು ಸಭೆಯಲ್ಲಿ ತಿಳಿಸಿದರು.
ಇದೆ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಮುಂಬರುವ ಮಳೆಗಾಲ ಹಾಗೂ ನಂತರದ ದಿನಗಳಲ್ಲಿ ಮಲೇರಿಯಾ ಡೆಂಘೀ, ಚಿಕನ್ಗುನ್ಯಾ ಹಾಗೂ ಕೀಟಜನ್ಯ ರೋಗಗಳು ಹರಡುವ ಸಾಧ್ಯತೆ ಇರುತ್ತದೆ. ಅವುಗಳ ನಿಯಂತ್ರಣ ಹಾಗೂ ಮುಂಜಾಗೃತಾ ಕ್ರಮಗಳ ಕುರಿತು ಜಿಲ್ಲಾ ಮಟ್ಟದ ಅಂತರ್ ಇಲಾಖಾ ಸಮನ್ವಯ ಸಮಿತಿಯ ಸಭೆ ಜರುಗಿತು.
ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಸ್.ಎಂ.ಹೊನಕೇರಿ ಅವರು ಸ್ವಾಗತಿ, ಪ್ರಾಸ್ತಾವಿಕವಾಗಿ ಮಾತನಾಡಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಯೋಜನೆ ಸಮರ್ಪಕ ಅನುಷ್ಠಾನದ ಕುರಿತು ಸಭೆಯಲ್ಲಿ ವಿವರಿಸಿದರು. ಜಿಲ್ಲಾ ಆರ್.ಸಿ.ಎಚ್.ಓ ಅಧಿಕಾರಿ ಡಾ.ಸುಜಾತಾ ಹಸವೀಮಠ ಅವರು ವಂದಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಸಂಗಪ್ಪ ಗಾಬಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಜೀಜ ದೇಸಾಯಿ ಸೇರಿದಂತೆ ಆರೋಗ್ಯ ಇಲಾಖೆಯ ವಿವಿಧ ಕಾರ್ಯಕ್ರಮ ಅಧಿಕಾರಿಗಳು, ತಾಲೂಕಾ ಆರೋಗ್ಯಾಧಿಕಾರಿಗಳು ಮತ್ತು ಶಿಕ್ಷಣ, ಗ್ರಾಮೀಣಾಭೀವೃಧ್ಧಿ ಮತ್ತು ಪಂಚಾಯತ ರಾಜ್, ಮಹಿಳಾ ಮತ್ತು ಮಕ್ಕಳ್ಳ ಅಭಿವೃದ್ದಿ, ನಗರಾಭಿವೃದ್ಧಿ, ಅಲ್ಪ ಸಂಖ್ಯಾತರ ಕಲ್ಯಾಣ, ಸಾರಿಗೆ, ಕಾರ್ಮಿಕ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ, ಆಯುಷ್, ಹೆಸ್ಕಾಂ, ಭಾರತೀಯ ಮಕ್ಕಳ ತಜ್ಞರ ಸಂಘ ಮತ್ತು ಭಾರತೀಯ ವೈದ್ಯಕೀಯ ಸಂಘ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸರ್ಕಾರೇತರ ಸಂಘ, ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.





















