Home ಜಿಲ್ಲೆ ಮಹಿಳಾ ಪೊಲೀಸ್ ಠಾಣೆಗಳು ಮಹಿಳೆಯರಿಗೆ ಸುರಕ್ಷತೆ ನೀಡುವ ಕೇಂದ್ರಗಳಾಗಬೇಕು

ಮಹಿಳಾ ಪೊಲೀಸ್ ಠಾಣೆಗಳು ಮಹಿಳೆಯರಿಗೆ ಸುರಕ್ಷತೆ ನೀಡುವ ಕೇಂದ್ರಗಳಾಗಬೇಕು

ಧಾರವಾಡ, ಮೇ 20: ಮಹಿಳೆಯರ ಮೇಲಿನ ದೌರ್ಜನ್ಯ, ಕಿರುಕುಳ ಹಾಗೂ ಸೈಬರ್ ಅಪರಾಧ ಪ್ರಕರಣಗಳಿಗೆ ತ್ವರಿತ ಸ್ಪಂದನೆ ನೀಡುವುದು ಪೆÇಲೀಸ್ ಇಲಾಖೆಯ ಮೊದಲ ಆದ್ಯತೆಯಾಗಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌದರಿ ಅವರು ಹೇಳಿದರು.

ಅವರು ಧಾರವಾಡ ಗ್ರಾಮೀಣ ಪೆÇಲೀಸ್ ಠಾಣೆ ಹತ್ತಿರದ ಮಹಿಳಾ ಪೆÇಲೀಸ್ ಠಾಣೆಗೆ ಭೇಟಿ ನೀಡಿ, ಅಲ್ಲಿನ ಕಾರ್ಯವೈಖರಿ, ಮೂಲಸೌಕರ್ಯಗಳು ಹಾಗೂ ಮಹಿಳೆಯರಿಗೆ ನೀಡಲಾಗುತ್ತಿರುವ ಸೇವೆಗಳ ಕುರಿತು ಪರಿಶೀಲನೆ ನಡೆಸಿದರು.

ಮಹಿಳೆಯರು ಯಾವುದೇ ರೀತಿಯ ಅನ್ಯಾಯ, ಶೋಷಣೆ ಅಥವಾ ಕಿರುಕುಳಕ್ಕೆ ಒಳಗಾದಾಗ ಭಯಪಡದೆ ಮುಂದೆ ಬಂದು ದೂರು ನೀಡಬೇಕು. ಮಹಿಳಾ ಪೆÇಲೀಸ್ ಠಾಣೆಗಳು ಮಹಿಳೆಯರಿಗೆ ಸುರಕ್ಷತೆ ಹಾಗೂ ಆತ್ಮವಿಶ್ವಾಸ ತುಂಬುವ ಕೇಂದ್ರಗಳಾಗಬೇಕು. ಪೆÇಲೀಸ್ ಸಿಬ್ಬಂದಿ ಮಹಿಳೆಯರೊಂದಿಗೆ ವಿನಯ ಹಾಗೂ ಮಾನವಿಯತೆಯಿಂದ ವರ್ತಿಸಬೇಕು ಎಂದು ಅವರು ಹೇಳಿದರು.

ಠಾಣೆಯ ದಾಖಲೆಗಳು, ಮಹಿಳೆಯರಿಗಾಗಿ ಕಲ್ಪಿಸಲಾದ ಪ್ರತ್ಯೇಕ ಕೊಠಡಿಗಳು, ಸಲಹಾ ಕೇಂದ್ರ ಹಾಗೂ ದೂರು ನಿರ್ವಹಣಾ ವ್ಯವಸ್ಥೆಯನ್ನು ಅವಲೋಕಿಸಿದರು. ಮಹಿಳಾ ದೌರ್ಜನ್ಯ ಪ್ರಕರಣಗಳಲ್ಲಿ ತನಿಖೆಯನ್ನು ವಿಳಂಬ ಮಾಡದೇ, ಕಾನೂನು ಪ್ರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಾರ್ವಜನಿಕರಲ್ಲಿ ಮಹಿಳಾ ಸಹಾಯವಾಣಿ, ಕಾನೂನು ನೆರವು ಹಾಗೂ ಮಹಿಳಾ ಆಯೋಗದ ಸೇವೆಗಳ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಬೇಕು. ಮಹಿಳೆಯರ ಸುರಕ್ಷತೆ ಮತ್ತು ಗೌರವ ಕಾಪಾಡುವಲ್ಲಿ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕೆಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಮಹಿಳಾ ಪೊಲೀಸ್ ಠಾಣೆಯ ಇನಸ್ಪೆಕ್ಟರ್ ರಾಮನಗೌಡ ಸಂಕನಾಳ, ಪೆÇಲೀಸ್ ಇಲಾಖೆ ಅಧಿಕಾರಿಗಳು, ಮಹಿಳಾ ಪೆÇಲೀಸ್ ಠಾಣೆಯ ಸಿಬ್ಬಂದಿ ಹಾಗೂ ಇತರ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.