Home ಜಿಲ್ಲೆ ನೂತನ ಕಚೇರಿ ಹಾಗೂ ಸರ್ಕಾರಿ ಆಸ್ಪತ್ರೆಗೆ ಎಂಎಲ್ಸಿ ಪಾಟೀಲ ಭೇಟಿ

ನೂತನ ಕಚೇರಿ ಹಾಗೂ ಸರ್ಕಾರಿ ಆಸ್ಪತ್ರೆಗೆ ಎಂಎಲ್ಸಿ ಪಾಟೀಲ ಭೇಟಿ

ಔರಾದ್ :ಮೇ.20: ವಿಧಾನ ಪರಿಷತ್ ಸದಸ್ಯ ಭೀಮರಾವ ಪಾಟೀಲ ಅವರು ಪಟ್ಟಣದಲ್ಲಿ ತಮ್ಮ ನೂತನ ಕಚೇರಿ ಹಾಗೂ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಜನರ ಅಹವಾಲು ಆಲಿಸಿದರು.

ತಾಲ್ಲೂಕಿನಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಕಚೇರಿ ತೆರೆದಿದೆ, ಸಾರ್ವಜನಿಕರು ಸಮಸ್ಯೆಗಳನ್ನು ಇದ್ದಲ್ಲಿ ಸಂಪರ್ಕಿಸಿ, ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದ ಅವರು ಅಧಿಕಾರಿಗಳಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಸ್ಥಳದಲ್ಲೇ ಕೆಲ ಸಮಸ್ಯೆಗಳನ್ನು ಇತ್ಯರ್ಥಗೊಳಿಸಿದರು. ಇನ್ನುಳಿದ ಸಮಸ್ಯೆಗಳಿಗೆ ಶೀಘ್ರವೇ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ತದನಂತರ ಪಟ್ಟಣದ ಸರ್ಕಾರಿ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಕ್ಷೇಮ ವಿಚಾರಿಸಿದರು, ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆ ಹಾಗೂ ಉತ್ತಮ ಸ್ವಚ್ಛತೆ ಕಾಪಾಡುವಂತೆ ತಿಳಿಸಿದರು. ಔಷಧಿ ಕೊರತೆ ಹಾಗೂ ಡಯಾಲಿಸಿಸ್, ಎಕ್ಸ್ ರೇ ಸೇರಿದಂತೆ ಹತ್ತು ಹಲವು ಸಮಸ್ಯೆಗಳ ದೂರು ಬಂದಿದ್ದು ಅದನ್ನು ಶೀಘ್ರವೇ ಪರಿಹಾರ ಕಂಡುಕೊಳ್ಳಲು ಕ್ರಮ ಕೈಗೊಳ್ಳಬೇಕು ವೈದ್ಯರಿಗೆ ಸಲಹೆ ನೀಡಿದರು.

ಈ ಸಂಧರ್ಭದಲ್ಲಿ ಹಿರಿಯ ಮುಖಂಡರಾದ ಶಿವರಾಜ ದೇಶಮುಖ, ರಾಮಣ್ಣ ವಡಿಯಾರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜಕುಮಾರ ಹಲ್ಬುರ್ಗೆ, ಆನಂದ ಚವ್ಹಾಣ, ಸುಧಾಕರ ಕೊಳ್ಳೂರ, ಶಿವಶಂಕರ ಎಕಲಾರ, ರಮೇಶ ಪಾಟೀಲ, ದತ್ತಾತ್ರಿ ಬಾಪುರೆ, ಚಂದು ಡಿಕೆ, ರಮೇಶ ಚವ್ಹಾಣ ಸೇರಿದಂತೆ ಕಾರ್ಯಕರ್ತರು ಪಾಲ್ಗೊಂಡಿದ್ದರು.