Home ಜಿಲ್ಲೆ ಕಲಬುರಗಿ ಮಿಣಜಗಿ ಗ್ರಾಮದಲ್ಲಿ ಸಿಸಿ ರಸ್ತೆ ನಿರ್ಮಾಣಕ್ಕೆ ಗುದ್ದಲಿ ಪೂಜೆ

ಮಿಣಜಗಿ ಗ್ರಾಮದಲ್ಲಿ ಸಿಸಿ ರಸ್ತೆ ನಿರ್ಮಾಣಕ್ಕೆ ಗುದ್ದಲಿ ಪೂಜೆ

ಕಲಬುರಗಿ:ಮೇ.20: ಜಿಲ್ಲೆಯ ಅಫಜಲಪುರ ಮತಕ್ಷೇತ್ರದ ಮಿಣಜಗಿ ಗ್ರಾಮದಲ್ಲಿ ಕೆಕೆಆರ್‍ಡಿಬಿ (ಏಏಖಆಃ) 2025-26ನೇ ಸಾಲಿನ ಮೈಕ್ರೋ (ಎಸ್‍ಸಿಪಿ) ಯೋಜನೆಯಡಿ ಮಂಜೂರಾದ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಮಂಗಳವಾರ ಗುದ್ದಲಿ ಪೂಜೆ ನೆರವೇರಿಸಲಾಯಿತು.

ಸುಮಾರು 13.35 ಲಕ್ಷ ರೂ. ಅಂದಾಜು ವೆಚ್ಚದಲ್ಲಿ ನಿರ್ಮಾಣವಾಗಲಿರುವ ಈ ರಸ್ತೆ, ಗ್ರಾಮದಲ್ಲಿನ ಪ್ರಮುಖ ಸಂಪರ್ಕ ಮಾರ್ಗವಾಗಿದ್ದು, ಹಲವು ವರ್ಷಗಳಿಂದ ಕೆಸರು ಮತ್ತು ದುಸ್ಥಿತಿಯಿಂದ ಬಳಲುತ್ತಿದ್ದ ಜನರಿಗೆ ಶಾಶ್ವತ ಪರಿಹಾರ ನೀಡಲಿದೆ. ಕಾಮಗಾರಿ ಪೂರ್ಣಗೊಂಡ ಬಳಿಕ ಸಂಚಾರ ಸುಗಮವಾಗುವುದರ ಜೊತೆಗೆ ಗ್ರಾಮಾಭಿವೃದ್ಧಿಗೆ ಉತ್ತೇಜನ ಸಿಗಲಿದೆ ಎಂದು ಗ್ರಾಮಸ್ಥರು ಅಭಿಪ್ರಾಯಪಟ್ಟರು.

ಗ್ರಾಮಸ್ಥರ ಸಹಭಾಗಿತ್ವದಲ್ಲಿ ಸರಳವಾಗಿ ನಡೆದ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಸ್ಥಳೀಯರು ರಸ್ತೆ ನಿರ್ಮಾಣ ಕಾರ್ಯ ಶೀಘ್ರ ಪೂರ್ಣಗೊಳ್ಳಲಿ ಎಂದು ಆಶಿಸಿದರು. ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಸರ್ಕಾರ ಕೈಗೊಂಡಿರುವ ಈ ಯೋಜನೆ ಗ್ರಾಮದಲ್ಲಿ ಹೊಸ ಆಶಾಭಾವನೆ ಮೂಡಿಸಿದೆ.

ಈ ಸಂದರ್ಭದಲ್ಲಿ ಸಿದ್ದಣ್ಣ ಗೌಡ ಪಾಟೀಲ್, ಲಿಂಗಣ್ಣ ಗೌಡ ಪಾಟೀಲ್, ಅಶೋಕ್ ನಡುವಿನಕೆರಿ, ಮಾಳಮ್ಮ ನಡುವಿನಕೆರಿ, ಹಸನಪ್ಪ ಪಟ್ಟೆದಾರ್, ಮರಬು ಹರಿಜನ್, ಕಾಂಟ್ರಾಕ್ಟರ್ ಕುಮಾರಸ್ವಾಮಿ ಹಿರೇಮಠ, ಶಿವಕುಮಾರ್, ಸುಪ್ರೀತ್ ಹಿರೇಮಠ, ನವೀನ್ ರಾಠೋಡ್ ಸೇರಿದಂತೆ ಹಲವಾರು ಗ್ರಾಮಸ್ಥರು ಉಪಸ್ಥಿತರಿದ್ದರು.

ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ಇಂತಹ ಇನ್ನಷ್ಟು ಯೋಜನೆಗಳನ್ನು ಸರ್ಕಾರ ಜಾರಿಗೊಳಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.