Home ಜಿಲ್ಲೆ ಡಿಹೆಚ್ಒ ಕಛೇರಿಯಲ್ಲಿ ಭಯೋತ್ಪಾದನಾ ವಿರೋಧಿ ಪ್ರತಿಜ್ಙೆ ಸ್ವೀಕಾರ

ಡಿಹೆಚ್ಒ ಕಛೇರಿಯಲ್ಲಿ ಭಯೋತ್ಪಾದನಾ ವಿರೋಧಿ ಪ್ರತಿಜ್ಙೆ ಸ್ವೀಕಾರ

ಸಂಜೆವಾಣಿ ವಾರ್ತೆ

ಹೊಸಪೇಟೆ.ಮೇ.22 ಸ್ಥಳೀಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿಯಲ್ಲಿ ಗುರುವಾರ ಭಯೋತ್ಪಾದನಾ ವಿರೋಧಿ ದಿನವನ್ನು ಆಚರಿಸಲಾಯಿತು.

ಭಯೋತ್ಪಾದನಾ ವಿರೋಧಿ ದಿನದ ಅಂಗವಾಗಿ ಆರೋಗ್ಯ ಇಲಾಖೆ ಮತ್ತು ಸಿಬ್ಬಂದಿಗಳು ಪ್ರತಿಜ್ಙಾವಿಧಿ ಸ್ವೀಕರಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ Pಲ್ಯಣಾಧಿಕಾರಿ ಡಾ.ಎಲ್.ಆರ್.ಶಂಕರ್ ನಾಯ್ಕ್ ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಜಿಲ್ಲಾ ಉಪ ಅರೋಗ್ಯ ಶಿಕ್ಷಣಾಧಿಕಾರಿ ಎಂ.ಪಿ.ದೊಡಮನಿ ಪ್ರತಿಜ್ಙಾವಿಧಿ ಬೋಧಿಸಿದರು.

ಅಹಿಂಸೆ ಹಾಗೂ ಸಹನೆಗೆ ಹೆಸರಾದ ನಮ್ಮ ರಾಷ್ಟ್ರದ ಭವ್ಯ ಪರಂಪರೆಯಲ್ಲಿ ದೃಡ ವಿಶ್ವಾಸವುಳ್ಳ ಭಾರತದ ಪ್ರಜೆಗಳಾದ ನಾವು ಎಲ್ಲಾ ಬಗೆಯ ಭಯೋತ್ಪಾದನೆ ಮತ್ತು ಹಿಂಸೆಯನ್ನು ನಮ್ಮಲ್ಲ ಶಕ್ತಿ ಸಾಮರ್ಥ್ಯದಿಂದ ಎದುರಿಸುತ್ತೇವೆ ಎಂದು ಈ ಮೂಲಕ ಶ್ರದ್ದಾಪೂರ್ವಕವಾಗಿ ಪ್ರತಿಜ್ಞೆ ಮಾಡುತ್ತೇವೆ. ನಮ್ಮ ಸಹಬಾಂಧವರಲ್ಲಿ ಶಾಂತಿ, ಸಾಮಾಜಿಕ ಸೌಹಾರ್ದತೆ ಮತ್ತು ಪರಸ್ಪರ ಅರಿವನ್ನು ಸಾಧಿಸಲು ಹಾಗೂ ಉತ್ತೇಜಿಸಲು ಮತ್ತು ಮಾನವ ಜೀವಕ್ಕೆ ಹಾಗೂ ಮೌಲ್ಯಗಳಿಗೆ ಬೆದರಿಕೆ ಒಡ್ಡುತ್ತಿರುವ ವಿಚ್ಛಿದ್ರಕಾರಿ ಶಕ್ತಿಗಳ ವಿರುದ್ಧ ಹೋರಾಡಲು ನಾವು ಪಣ ತೊಡುತ್ತೇವೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಪ್ರತಿಜ್ಙಾವಿಧಿ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಪಣ್ಮುಖ ನಾಯ್ಕ. ತಾಲ್ಲೂಕು ಅರೋಗ್ಯ ಅಧಿಕಾರಿ ಡಾ.ವಿನೋದ್, ಅರೋಗ್ಯ ನಿರೀಕ್ಷಣಾಧಿಕಾರಿ ಎಂ.ಧರ್ಮನಗೌಡ ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಇದ್ದರು.