Home ಜಿಲ್ಲೆ ಕಲಬುರಗಿ ಜಿಲ್ಲಾ ಪಂಚಾಯತ್ ಸಿಇಓಗೆ ಹೃದಯಸ್ಪರ್ಶಿ ಬೀಳ್ಕೊಡುಗೆ

ಜಿಲ್ಲಾ ಪಂಚಾಯತ್ ಸಿಇಓಗೆ ಹೃದಯಸ್ಪರ್ಶಿ ಬೀಳ್ಕೊಡುಗೆ

ಕಲಬುರಗಿ,ಮೇ.24: ಕಲಬುರಗಿ ಜಿಲ್ಲೆಯ ಅಭಿವೃದ್ಧಿಗೆ ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಯ ಸಹಯೋಗದೊಂದಿಗೆ ತಂಡದ ರೂಪದಲ್ಲಿ ಕಾರ್ಯನಿರ್ವಹಿಸಿದ ತೃಪ್ತಿ ತಮಗಿದೆ ಎಂದು ನಿರ್ಗಮಿತ ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ ಹೇಳಿದರು.
ಇಲ್ಲಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಚಿಕ್ಕಮಗಳೂರು ಜಿಲ್ಲಾಧಿಕಾರಿಯಾಗಿ ಮುಂಬಡ್ತಿ ಪಡೆದು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಆಯೋಜಿಸಿದ ಬೀಳ್ಕೊಡುಗೆ ಸಮಾರಂಭದಲ್ಲಿ ಕಚೇರಿ ಸಿಬ್ಬಂದಿಯಿಂದ ಆತ್ಮೀಯ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ತಮಗೆ ಮೂರು ವರ್ಷಗಳ ಕಾಲ ಸುಧೀರ್ಘವಾಗಿ ಗ್ರಾಮೀಣ ಜನರ ಸೇವೆ ಸಲ್ಲಿಸುವ ಸೌಭಾಗ್ಯ ನನ್ನದಾಗಿತ್ತು ಎಂದರು.
ಇದೇ ಸಂದರ್ಭದಲ್ಲಿ ನೂತನ ಜಿಲ್ಲಾ ಪಂಚಾಯತ್ ಸಿ.ಇ.ಓ ಆಗಿ ಅಧಿಕಾರ ವಹಿಸಿಕೊಂಡಿರುವ ರಾಹುಲ ಸಂಕನೂರ್ ಅವರಿಗೂ ಜಿಲ್ಲಾ ಪಂಚಾಯತ್ ಕಚೇರಿ ಸಿಬ್ಬಂದಿಗಳು ಹೂಗುಚ್ಛ ನೀಡಿ ಸ್ವಾಗತ ಕೋರಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಇಕ್ರಮ್ ಶರೀಫ್, ನಗರ ಪೆÇಲೀಸ್ ಆಯುಕ್ತ ಡಾ.ಎಸ್.ಡಿ ಶರಣಪ್ಪ, ಎಸ್.ಪಿ. ಅಡ್ಡೂರು ಶ್ರೀನಿವಾಸುಲು, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಜಿಪಂ ಉಪ ಕಾರ್ಯದರ್ಶಿ ಲಕ್ಷ್ಮಣ ಶೃಂಗೇರಿ ಸೇರಿದಂತೆ ಜಿಲ್ಲಾ ಪಂಚಾಯತಿಯ ಅಧಿಕಾರಿ-ಸಿಬ್ಬಂದಿಗಳು, ಇತರೆ ಇಲಾಖೆಯ ಅಧಿಕಾರಿಗಳು, ತಾಲೂಕಿನ ತಹಶೀಲ್ದಾರರು, ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಭಾಗವಹಿಸಿದ್ದರು.