Home ಜಿಲ್ಲೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ: ಸಭೆ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ: ಸಭೆ

ಗದಗ,ಮೇ ೨೮: ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಅವರ ಅಧ್ಯಕ್ಷತೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-೨೦೨೬ ರ ಕುರಿತು ರಾಜಕೀಯ ಪಕ್ಷಗಳ ಮುಖಂಡರೊAದಿಗೆ ಸಭೆ ಜರುಗಿತು.

ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಅವರು ಮಾತನಾಡಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ -೨೦೨೬ ರ ಕಾರ್ಯವನ್ನು ಜರುಗಿಸಲು ಭಾರತ ಚುನಾವಣಾ ಆಯೋಗವು ದಿನಾಂಕಃ ೧೪-೦೫-೨೦೨೬ ರಂದು ಹೊರಡಿಸಿದ ಹಿನ್ನೆಲೆಯಲ್ಲಿ ದಿನಾಂಕಃ ೨೫-೦೫-೨೦೨೬ ರಂದು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ -೨೦೨೬ ಸಂಬAಧಿಸಿದ ವಿಷಯಗಳ ಕುರಿತು ಸಮಗ್ರ ಮಾಹಿತಿಯನ್ನು ನೀಡಲು ಜಿಲ್ಲೆಯ ನೋಂದಾಯಿತ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಮುಖಂಡರೊAದಿಗೆ ಸಭೆ ಆಯೋಜಿಸಲಾಗಿದೆ ಎಂದರು.

ಚುನಾವಣಾ ಆಯೋಗದ ವೇಳಾಪಟ್ಟಿಯನ್ವಯ ಪೂರ್ವ ತಯಾರಿ ಕುರಿತಂತೆ ಹಾಗೂ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕುರಿತಂತೆ ಮಾಹಿತಿಯನ್ನು ನೀಡಿದ ಅವರು ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ, ಜಿಲ್ಲಾ ಚುನಾವಣಾಧಿಕಾರಿಗಳ, ಅಪರ ಜಿಲ್ಲಾ ಚುನಾವಣಾಧಿಕಾರಿಗಳ, ಚುನಾವಣಾ ತಹಶೀಲ್ದಾರ, ಮತದಾರ ನೋಂದಣಾಧಿಕಾರಿಗಳ ಹಾಗೂ ಸಹಾಯಕ ಮತದಾರ ನೋಂದಣಾಧಿಕಾರಿಗಳ ವಿವರಗಳನ್ನು ಜಿಲ್ಲಾಧಿಕಾರಿಗಳು ತಿಳಿಸಿದರು.

ಪ್ರಸ್ತುತ, ಜಿಲ್ಲೆಯ ೪ ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು ೯೬೭ ಮತಗಟ್ಟೆಗಳಿದ್ದು, ೪,೪೮,೭೯೪ ಪುರುಷ ಮತದಾರರು, ೪,೫೬,೩೫೨ ಮಹಿಳಾ ಮತದಾರರು ಹಾಗೂ ೬೦ ತೃತೀಯ ಲಿಂಗಿ ಮತದಾರರು ಸೇರಿದಂತೆ ಒಟ್ಟು ೯,೦೫,೨೦೬ ಮತದಾರರಿರುತ್ತಾರೆ. ಪ್ರತಿ ಮತಗಟ್ಟೆಗೆ ಒಬ್ಬರಂತೆ, ಜಿಲ್ಲೆಯಲ್ಲಿ ಒಟ್ಟು ೯೬೭ ಮತಗಟ್ಟೆ ಮಟ್ಟದ ಅಧಿಕಾರಿ (ಬಿ.ಎಲ್.ಓ) ಗಳು ಹಾಗೂ ಪ್ರತಿ ೧೦ ಬಿ.ಎಲ್.ಓ ಗಳಿಗೆ ಒಬ್ಬ ಮೇಲ್ವಿಚಾರಕರಂತೆ ಒಟ್ಟು ೯೭ ಬಿ.ಎಲ್.ಓ ಮೇಲ್ವಿಚಾರಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ೨೦೦೨ ರ ಮತದಾರರ ಪಟ್ಟಿಗೆ ೨೦೨೫ ರ ಮತದಾರರನ್ನು ಮ್ಯಾಪಿಂಗ್ ಮಾಡುವಲ್ಲಿ, ಜಿಲ್ಲೆಯ ಒಟ್ಟು ೯,೦೫,೨೦೬ ಮತದಾರರ ಪೈಕಿ ೮,೨೬,೯೫೩ ಮತದಾರರನ್ನು ಮ್ಯಾಪಿಂಗ್ ಮಾಡಿದ್ದು, ಶೇಕಡಾ ೯೧.೩೬ರಷ್ಟು ಪ್ರಗತಿಯನ್ನು ಸಾಧಿಸಿರುತ್ತಾರೆ.ಮತದಾರರ ಸಂಖ್ಯೆವಾರು ಮತಗಟ್ಟೆಗಳ ಮಾಹಿತಿಯನ್ನು ಮತ್ತು ಮತಗಟ್ಟೆ ಸಂಖ್ಯೆವಾರು ಮತಗಟ್ಟೆ ಸ್ಥಳಗಳ ಮಾಹಿತಿಯನ್ನು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲೆಯ ಎಲ್ಲ ೯೬೭ ಮತಗಟ್ಟೆಗಳಿಗೆ, ಮತಗಟ್ಟೆ ಮಟ್ಟದ ಏಜೆಂಟ್ (ಃಐಂ) ಗಳನ್ನು ನೇಮಕ ಮಾಡಿ ಪಟ್ಟಿಯನ್ನು ನೀಡಲು ಜಿಲ್ಲಾಧಿಕಾರಿಗಳು ತಿಳಿಸಿದರು.

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಬಿ.ಎಲ್.ಓ, ಸಹಾಯಕ ಮತದಾರ ನೋಂದಣಾಧಿಕಾರಿಗಳು ಹಾಗೂ ಮತದಾರ ನೋಂದಣಾಧಿಕಾರಿಗಳ ಜೊತೆ ಸಹಕಾರ ನೀಡುವಂತೆ ಸಂಬAಧಿಸಿದ ನೋಂದಾಯಿತ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಮುಖಂಡರುಗಳಿಗೆ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ರೋಹನ್ ಜಗದೀಶ್, ಅಪರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್, ಜಿಲ್ಲೆಯ ಮತದಾರರ ನೊಂದಣಾಧಿಕಾರಿಗಳು, ಚುನಾವಣಾ ತಹಶೀಲ್ದಾರರು, ಜಿಲ್ಲೆಯ ಎಲ್ಲ ಸಹಾಯಕ ಮತದಾರ ನೊಂದಣಾಧಿಕಾರಿಗಳು ಹಾಗೂ ತಹಶೀಲ್ದಾರರು, ಜಿಲ್ಲೆಯ ರಾಜಕೀಯ ಪಕ್ಷದ ಪ್ರತಿನಿಧಿಗಳು/ ಪದಾಧಿಕಾರಿಗಳು ಹಾಜರಿದ್ದರು.