
ಧಾರವಾಡ, ಮೇ ೨೮: ಜಿಲ್ಲೆಯಲ್ಲಿ ಕೃಷಿ ಹಾಗೂ ಕೈಗಾರಿಕೆಗಳಿಗೆ ಪೂರಕವಾದ ಸಣ್ಣ ಉದ್ಯಮಗಳನ್ನು ಸ್ಥಾಪಿಸಿ, ಪ್ರೋತ್ಸಾಹಿಸಲು ಜಿಲ್ಲೆಯ ಎಲ್ಲ ಬ್ಯಾಂಕ್ಗಳು ಸಹಕರಿಸಬೇಕು. ಸರ್ಕಾರದ ನಿರ್ದೇಶನ ನೀಡಿ, ಹಾಗೂ ಆರ್ಬಿಐ ಮಾರ್ಗಸೂಚಿಗಳನ್ನು ಉಲ್ಲಂಘಿಸಿ, ಸಾಲ ವಸೂಲಾತಿಯನ್ನು ಮಾಡಬಾರದೆಂದು ಜಿಲ್ಲಾಧಿಕಾರಿ ಹಾಗೂ ಸಮಿತಿಯ ಸಹ ಅಧ್ಯಕ್ಷರಾಗಿರುವ ಸ್ನೇಹಲ್ ಆರ್. ಅವರು ಹೇಳಿದರು.
ಧಾರವಾಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲಾಧಿಕಾರಿ ಅವರ ಸಹಾಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಬ್ಯಾಂಕರ್ಸ್ ಸಮಿತಿ ಹಾಗೂ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಮಿತಿ (ಡಿ.ಎಲ್.ಆರ್.ಸಿ) ಸಭೆ ಜರುಗಿತು. ಸಭೆಯಲ್ಲಿ ೨೦೨೫-೨೬ನೇ ಸಾಲಿನ ವಿವಿಧ ಸಾಲಸಂಬAಧಿತ ಸರ್ಕಾರಿ ಯೋಜನೆಗಳ ಪ್ರಗತಿ ಹಾಗೂ ಆದ್ಯತಾ ವಲಯ ಸಾಲ ವಿತರಣೆ ಕುರಿತು ಸಮಗ್ರ ಪರಿಶೀಲನೆ ನಡೆಸಲಾಯಿತು.
ಜಿಲ್ಲಾಧಿಕಾರಿ ಹಾಗೂ ಸಮಿತಿಯ ಸಹ ಅಧ್ಯಕ್ಷರಾಗಿರುವ ಸ್ನೇಹಲ್ ಆರ್. ಅವರು ಮಾತನಾಡಿ, ರೈತರು ಹಾಗೂ ಸ್ವಯಂ ಉದ್ಯೋಗಿಗಳು ಸಾಲ ವಸೂಲಾತಿಯಲ್ಲಿ ತಾರತಮ್ಯ ಮಾಡುತ್ತಿದ್ದು, ಸರ್ಕಾರದಿಂದ ಸಿಗುವ ಸಬ್ಸಿಡಿ ಹಣವನ್ನು ಸಾಲದ ಮೊತ್ತಕ್ಕೆ ಹೊಂದಾಣಿಕೆ ಮಾಡಲಾಗುತ್ತಿದೆ ಎಂದು ಅನೇಕರು ದೂರು ನೀಡುತ್ತಿದ್ದಾರೆ. ಈ ಕುರಿತು ಸರ್ಕಾರದ ನಿರ್ದೇಶನಗಳನ್ನು ಪಾಲಿಸಬೇಕು. ಸಹಾಯಧನದ ಹಣವನ್ನು ಯಾವುದೇ ಕಾರಣಕ್ಕೂ ಸಾಲಕ್ಕೆ ಹೊಂದಾಣಿಕೆ ಮಾಡಬಾರದು ಎಂದು ಜಿಲ್ಲಾಧಿಕಾರಿಗಳು ಬ್ಯಾಂಕ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸರ್ಕಾರ ಹಲವು ಬ್ಯಾಂಕುಗಳನ್ನು ಸ್ಥಾಪಿಸಿರುವ ಉದ್ದೇಶ ಜನರಿಗೆ ನೆರವಾಗುವುದು ಮತ್ತು ಉದ್ಯಮ ಚಟುವಟಿಕೆಗಳನ್ನು ಪ್ರೋತ್ಸಾಹಿಸುವುದಾಗಿದೆ. ರೈತರಿಗೆ ಹಾಗೂ ಸಣ್ಣ ಉದ್ಯಮಿಗಳಿಗೆ ತೊಂದರೆಯಾಗದAತೆ ಬ್ಯಾಂಕ್ ಅಧಿಕಾರಿಗಳು ಕ್ರಮ ವಹಿಸಬೇಕೆಂದು ಅವರು ತಿಳಿಸಿದರು.
ಬ್ಯಾಂಕ್ಗಳು ಗ್ರಾಮ ಪಂಚಾಯತಿ ಹಾಗೂ ಗ್ರಾಮ ಮಟ್ಟದಲ್ಲಿ ಸಭೆಗಳನ್ನು ಆಯೋಜಿಸಿ, ರೈತರಿಗೆ ಸಾಲ ಮರುಪಾವತಿ ಕುರಿತು ಜಾಗೃತಿ ಮೂಡಿಸಬೇಕು. ಸಾಲ ಮನ್ನಾ ಆಗುವ ನಿರೀಕ್ಷೆಯಲ್ಲಿ ಕಾಯದೆ ಸಾಧ್ಯವಾದ?ÀÄ್ಟ ಸಾಲ ತೀರಿಸುವಂತೆ ಪ್ರೇರೆಪಿಸಬೇಕು ಎಂದು ಅವರು ಹೇಳಿದರು.
ಪ್ರಧಾನಮಂತ್ರಿ ಉದ್ಯೋಗ ಸೃಜನ ಕಾರ್ಯಕ್ರಮ (ಪಿಎಮ್ಇಜಿಪಿ) ಯೋಜನೆಯಡಿ ಇನ್ನೂ ೧೪೨ ಅರ್ಜಿಗಳು ಬ್ಯಾಂಕುಗಳಲ್ಲಿ ಬಾಕಿ ಇವೆ. ಸಂಬAಧಿತ ಬ್ಯಾಂಕುಗಳು ಅವುಗಳನ್ನು ಆದ್ಯತೆಯ ಮೇರೆಗೆ ತಕ್ಷಣ ವಿಲೇವಾರಿ ಮಾಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ರೈತರಿಗೆ ಹಾಗೂ ಸೂಕ್ಷ್ಮ ಉದ್ಯಮಿಗಳಿಗೆ ಉತ್ತಮ ಬ್ಯಾಂಕಿAಗ್ ಸೇವೆ ಒದಗಿಸಬೇಕು. ರೈತರನ್ನು ಯಾವುದೇ ರೀತಿಯಲ್ಲಿ ಕಿರುಕುಳ ನೀಡಬಾರದು. ಇಲ್ಲವಾದಲ್ಲಿ ಅವರು ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೇಲೆ ಅವಲಂಬಿತರಾಗುವ ಪರಿಸ್ಥಿತಿ ಉಂಟಾಗುತ್ತದೆ ಎಂದು ಬ್ಯಾಂಕುಗಳಿಗೆ ಎಚ್ಚರಿಕೆ ನೀಡಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಸಮಿತಿಯ ಅಧ್ಯಕ್ಷರು ಆಗಿರುವ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಮಾತನಾಡಿ, ಸಾರ್ವಜನಿಕರು ಸಾಲ ಪಡೆಯಲು ಅರ್ಜಿಗಳನ್ನು ಸಲ್ಲಿಸಿದಾಗ ಬ್ಯಾಂಕುಗಳು ಸರಿಯಾಗಿ ಸ್ಪಂದಿಸಿ, ಶೀಘ್ರಗತಿಯಲ್ಲಿ ಸಾಲ ಮಂಜೂರಾತಿಗೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

























