Home ಜಿಲ್ಲೆ ಡೆಂಗೀ ಹಾಗೂ ಇತರೆ ಕೀಟಜನ್ಯ ರೋಗಗಳು ಬಾರದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಿ

ಡೆಂಗೀ ಹಾಗೂ ಇತರೆ ಕೀಟಜನ್ಯ ರೋಗಗಳು ಬಾರದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಿ

ಗದಗ, ಮೇ೨೯: ಜಿಲ್ಲೆಯಲ್ಲಿ ಡೆಂಗೀ ಹಾಗೂ ಇತರೆ ಕೀಟಜನ್ಯ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ರಾಷ್ಟಿçÃಯ ಡೆಂಗೀ ದಿನ ಮತ್ತು ಜಿಲ್ಲಾ ಮಟ್ಟದ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಮಲೇರಿಯಾ, ಡೆಂಗ್ಯೂ, ಚುಕ್ಯುನ್ ಗುನ್ಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯವರು ವಿವಿಧ ಇಲಾಖೆಯ ಸಮನ್ವಯತೆಯೊಂದಿಗೆ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಚತೆಯ ಕುರಿತು ಅರಿವು ಮೂಡಿಸಬೇಕು ಎಂದರು.

ಸಾರ್ವಜನಿಕ ನಲ್ಲಿಗಳು ಹಾಗೂ ಕೊಳವೆ ಬಾವಿಗಳಿರುವ ಪ್ರದೇಶಗಳಲ್ಲಿ ನೀರು ಸರಾಗವಾಗಿ ಹರಿದು ಹೋಗುವಂತೆ ಸೂಕ್ತ ವ್ಯವಸ್ಥೆ ಮಾಡಿರುವ ಕುರಿತು ಪರಿಶೀಲನೆ ನಡೆಸಬೇಕು. ಸೊಳ್ಳೆ ನಾಶಕ ದ್ರಾವಣವನ್ನು ಸೊಳ್ಳೆ ಉತ್ಪತ್ತಿಯಾಗುತ್ತಿರುವ ಸ್ಥಳದಲ್ಲಿ ಸಿಂಪಡಿಸಲು ಕ್ರಮ ಕೈಗೊಳ್ಳಬೇಕು. ಶಾಲೆಗಳಲ್ಲಿ ಆರೋಗ್ಯ ಶಿಕ್ಷಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಬಸ್ ಡಿಪೋಗಳಲ್ಲಿ ಖಾಲಿ ಟಾಯರ್ ಗಳಲ್ಲಿ ಹಾಗೂ ಘನ ತ್ಯಾಜ್ಯಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಖಾಲಿ ಟಾಯರ್ ಮೇಲೆ ಟಾರ್ಪಾಲನ್ನು ಹಾಕಿ ತಕ್ಷಣ ವಿಲೇವಾರಿಗೆ ಕ್ರಮ ವಹಿಸಬೇಕು. ಸಾಂಕ್ರಾಮಿಕ ರೋಗಗಳ ನಿಯಂತ್ರಣ ಹಾಗೂ ಸ್ವಚ್ಛತೆಯ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.

ಜಿಲ್ಲಾ ಸಮೀಕ್ಷಣಾಧಿಕಾರಿ ಡಾ. ವೆಂಕಟೇಶ ರಾಠೋಡ ಅವರು ಮಾತನಾಡಿ ಜಿಲ್ಲೆಯಲ್ಲಿ ಮಲೇರಿಯಾ ಪ್ರಕರಣಗಳಿಗೆ ಸಂಬAಧಿಸಿದAತೆ ೨೦೨೬ ಜನೆವರಿಯಿಂದ ಏಪ್ರಿಲ್ ವರೆಗೆ ೧೨೦೦೨೯ ರಕ್ತ ಲೇಪನ ಪರೀಕ್ಷೆಗಳನ್ನು ಕೈಗೊಳ್ಳಲಾಗಿದ್ದು ೨ ಮಲೇರಿಯಾ ಪ್ರಕರಣಗಳು ಖಚಿತಪಟ್ಟಿವೆ. ಡೆಂಗೀ ಪ್ರಕರಣಗಳಿಗೆ ಸಂಬAಧಿಸಿದAತೆ ೨೦೨೬ ಜನೆವರಿಯಿಂದ ಏಪ್ರಿಲ್‌ವರೆಗೆ ೬೦೭ ರಕ್ತದ ಮಾದರಿಗಳನ್ನು ಪರೀಕ್ಷಿಸಲಾಗಿದ್ದು ೧೭ ಡೆಂಗೀ ಪ್ರಕರಣಗಳು ಖಚಿತಪಟ್ಟಿವೆ. ಚಿಕೂನ್ ಗುನ್ಯಾ ಪ್ರಕರಣಗಳಿಗೆ ಸಂಬAಧಿಸಿದAತೆ ೨೦೨೬ ಜನೆವರೆಯಿಂದ ಏಪ್ರಿಲ್‌ವರೆಗೆ ೧೦೯ ರಕ್ತದ ಮಾದರಿ ಪರೀಕ್ಷಿಸಲಾಗಿದ್ದು ೭ ಚಿಕೂನ್ ಗುನ್ಯಾ ಪ್ರಕರಣಗಳು ಖಚಿಪಟ್ಟಿವೆ ಎಂದರು.

ಶಾಲಾ ಮಕ್ಕಳಿಗೆ ಡೆಂಗೀ ಹಾಗೂ ಕೀಟಜನ್ಯ ರೋಗಗಳ ನಿಯಂತ್ರಣ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಕೈಗೊಳ್ಳಲಾಗಿದೆ. ನಗರ ಹಾಗೂ ಗ್ರಾಮೀಣ ಪ್ರದೇಶಗಳಿಗೆ ತೆರಳಿ ಅಲ್ಲಿನ ಜನರಿಗೆ ಕೀಟಜನ್ಯ ರೋಗಗಳು ಬಾರದಂತೆ ಮುಂಜಾಗ್ರತೆ ವಹಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ತಿಳುವಳಿಕೆ ನೀಡಲಾಗಿದೆ. ಮನೆಗಳ ಮುಂದೆ ನೀರು ನಿಲ್ಲದಂತೆ ನೋಡಿಕೊಳ್ಳುವಂತೆ ಹಾಗೂ ಸ್ವಚ್ಛತೆಯ ಕುರಿತು ಅರಿವು ಮೂಡಿಸಲಾಗಿದೆ. ಕಸ ವಿಲೇವಾರಿ ವಾಹನದ ಮೂಲಕವೂ ಕೀಟಜನ್ಯ ರೋಗಗಳ ನಿಯಂತ್ರಣಕ್ಕಾಗಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದು ಡಾ.ವೆಂಕಟೇಶ ರಾಠೋಡ ಸಭೆಗೆ ವಿವರಿಸಿದರು.