
ಬೆಂಗಳೂರು, ಜೂ. ೩- ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಚಿವ ಸಂಪುಟದಲ್ಲಿ ಸಚಿವರಾಗಲಿರುವ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ವಿಧಾನಸಭಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಉಪಾಧ್ಯಕ್ಷರಿಗೆ ಯು.ಟಿ. ಖಾದರ್ ರಾಜೀನಾಮೆ ನೀಡಿ ನಂತರ ಲೋಕಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ, ವಿಧಾನಸಭಾಧ್ಯಕ್ಷರಾಗಿ ಮೂರು ವರ್ಷ ಕೆಲಸ ಮಾಡಲು ಸಹಕಾರ ನೀಡಿದ್ದಕ್ಕೆ ರಾಜ್ಯಪಾಲರಿಗೆ ಧನ್ಯವಾದ ಹೇಳಿ, ರಾಜೀನಾಮೆ ವಿಚಾರವನ್ನು ಅವರ ಗಮನಕ್ಕೆ ತಂದರು
ಇದಾದ ಬಳಿಕ ಯು.ಟಿ. ಖಾದರ್ ಅವರು ಕೆಪಿಸಿಸಿ ಕಚೇರಿಗೆ ತೆರಳಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನು ಪಡೆದುಕೊಂಡದರು.
.ಯು.ಟಿ. ಖಾದರ್ ಹೇಳಿಕೆ
ಡಿ.ಕೆ. ಶಿವಕುಮಾರ್ ಸಂಪುಟದಲ್ಲಿ ಸಚಿವ ಸ್ಥಾನ ಸಿಕ್ಕಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನಾವು ಯಾವುದೇ ಸ್ಥಾನದ ಬೇಡಿಕೆ ಇಟ್ಟಿರಲಿಲ್ಲ. ನಾಯಕರು ಯಾವುದೇ ಜವಾಬ್ದಾರಿ ಕೊಟ್ಟರು ನಿಭಾಯಿಸುತ್ತೇನೆ ಎಂದು ಹೇಳಿದ್ದೆ. ಈಗ ಹೈಕಮಾಂಡ್ ಸಚಿವ ಸ್ಥಾನ ನೀಡಿದೆ. ಇಂತಹ ಖಾತೆಗೆ ಬೇಡಿಕೆ ಇಟ್ಟಿಲ್ಲ. ಆರೋಗ್ಯ ಅಥವಾ ವಸತಿ ಖಾತೆ ಸಿಕ್ಕರೆ ಒಳಿತು ಎಂಬ ಬಯಕೆ ತಮ್ಮದಾಗಿದೆ ಎಂದರು.
























