Home ಜಿಲ್ಲೆ ಸಂಭ್ರಮದ ಶಾಲಾ ಪ್ರಾರಂಭೋತ್ಸವ

ಸಂಭ್ರಮದ ಶಾಲಾ ಪ್ರಾರಂಭೋತ್ಸವ

ಗದಗ,ಜೂ೩: ಹೊಸ ಶೈಕ್ಷಣಿಕ ವರ್ಷದ ಆರಂಭವನ್ನು ಸ್ಮರಣೀಯವಾಗಿಸುವ ಉದ್ದೇಶದಿಂದ ಗದಗ ಜಿಲ್ಲೆಯ ಗದಗ ತಾಲೂಕಿನ ಅಸುಂಡಿಯ ಕುವೆಂಪು ಶತಮಾನೋತ್ಸವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾರಂಭೋತ್ಸವ ಕಾರ್ಯಕ್ರಮ ಅತ್ಯಂತ ಅದ್ದೂರಿಯಾಗಿ ಹಾಗೂ ಸಂಭ್ರಮದಿAದ ಜರುಗಿತು. ಶಾಲೆಯ ಮೊದಲ ದಿನವೇ ಮಕ್ಕಳಲ್ಲಿ ಕಲಿಕೆಯ ಬಗ್ಗೆ ಆಸಕ್ತಿ ಮತ್ತು ಉತ್ಸಾಹ ಮೂಡಿಸುವ ಉದ್ದೇಶದಿಂದ ವಿವಿಧ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮಕ್ಕೂ ಮುನ್ನ ಗ್ರಾಮದ ಪ್ರಮುಖ ಬೀದಿಗಳಲ್ಲಿ ವಿದ್ಯಾರ್ಥಿಗಳ ಭವ್ಯ ಮೆರವಣಿಗೆ ನಡೆಸಲಾಯಿತು. ಎತ್ತಿನಗಾಡಿ ಹಾಗೂ ಟ್ರಾ÷?ಯಕ್ಟರ್‌ಗಳಲ್ಲಿ ಮಕ್ಕಳನ್ನು ಕೂರಿಸಿಕೊಂಡು ಗ್ರಾಮದಲ್ಲಿ ಮೆರವಣಿಗೆ ನಡೆಸಿ ಶಾಲೆಗೆ ಕರೆತರಲಾಯಿತು. ಮೆರವಣಿಗೆಯುದ್ದಕ್ಕೂ ಗ್ರಾಮಸ್ಥರು ಮಕ್ಕಳನ್ನು ಹರ್ಷೋದ್ಗಾರಗಳೊಂದಿಗೆ ಸ್ವಾಗತಿಸಿದರು.
ಶಾಲೆಯ ಮುಖ್ಯ ದ್ವಾರದಲ್ಲಿ ಅತಿಥಿಗಳು ಹಾಗೂ ಶಿಕ್ಷಕರು ಸೇರಿ ಮಕ್ಕಳ ಮೇಲೆ ಪುಷ್ಪವೃಷ್ಟಿ ಮಾಡುವ ಮೂಲಕ ಶಾಲೆಗೆ ಆತ್ಮೀಯವಾಗಿ ಬರಮಾಡಿಕೊಂಡರು. ಮಕ್ಕಳಿಗಾಗಿ ವಿಶೇಷವಾಗಿ ನಿರ್ಮಿಸಲಾಗಿದ್ದ ಸೆಲ್ಫಿ ಕಾರ್ನರ್ ವಿದ್ಯಾರ್ಥಿಗಳು ಮತ್ತು ಪಾಲಕರ ಗಮನ ಸೆಳೆಯಿತು.

ಶಾಲಾರಂಭೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರಡಿ ಮಾತನಾಡಿ, ಶಿಕ್ಷಣವು ಪ್ರತಿಯೊಬ್ಬ ಮಗುವಿನ ಮೂಲಭೂತ ಹಕ್ಕಾಗಿದ್ದು, ಸರ್ಕಾರ ಮತ್ತು ಸಂವಿಧಾನದ ಆಶಯವೂ ಎಲ್ಲ ಮಕ್ಕಳಿಗೆ ಗುಣಮಟ್ಟದ ಹಾಗೂ ಸಮಾನ ಶಿಕ್ಷಣ ಒದಗಿಸುವುದಾಗಿದೆ ಎಂದು ಹೇಳಿದರು.

ಮಕ್ಕಳಿಗೆ ಸುರಕ್ಷಿತ, ಸಂತೋಷದಾಯಕ ಮತ್ತು ಪ್ರೇರಣಾದಾಯಕ ವಾತಾವರಣದಲ್ಲಿ ಶಿಕ್ಷಣ ದೊರೆಯಬೇಕು. ಶಾಲೆಯ ಮೊದಲ ದಿನವೇ ಮಕ್ಕಳಲ್ಲಿ ಶಾಲೆಯ ಬಗ್ಗೆ ಪ್ರೀತಿ ಮತ್ತು ಅಭಿಮಾನ ಮೂಡಬೇಕು. ಅದಕ್ಕಾಗಿ ಪಾಲಕರು, ಶಿಕ್ಷಕರು ಹಾಗೂ ಶಾಲಾಭಿವೃದ್ಧಿ ಸಮಿತಿ ಸದಸ್ಯರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಶಾಲಾರಂಭದ ದಿನ ಮೂಡುವ ಸಂತಸ ಮಕ್ಕಳಲ್ಲಿ ವರ್ಷಪೂರ್ತಿ ಕಲಿಕೆಯ ಉತ್ಸಾಹವನ್ನು ಉಳಿಸಬಲ್ಲದು? ಎಂದು ಹೇಳಿದರು.

ಪ್ರತಿ ಶೈಕ್ಷಣಿಕ ವರ್ಷದ ಚಟುವಟಿಕೆಗಳನ್ನು ಪೂರ್ವಯೋಜಿತವಾಗಿ ರೂಪಿಸಿ ಅನುಷ್ಠಾನಗೊಳಿಸುವುದೇ ಶಾಲಾರಂಭೋತ್ಸವದ ಪ್ರಮುಖ ಉದ್ದೇಶವಾಗಿದೆ. ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದು, ಸರ್ಕಾರಿ ಶಾಲೆಗಳು ಇಂದು ಯಾವುದೇ ಖಾಸಗಿ ಶಾಲೆಗಳಿಗಿಂತ ಕಡಿಮೆ ಇಲ್ಲ ಎಂಬುದನ್ನು ಸಮಾಜ ಅರಿಯಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಗದಗ ಗ್ರಾಮೀಣ ಕ್ಷೇತ್ರ ಸಮನ್ವಯಾಧಿಕಾರಿ ಜೆ.ಎ ಭಾವಿಕಟ್ಟಿ, ಡಿ.ವೈ.ಪಿ.ಸಿ ರವಿ ಪ್ರಕಾಶ, ಪ್ರೌಢ ಶಾಲಾ ಶಿಕ್ಷಣ ಸಂಘದ ಅಧ್ಯಕ್ಷ ಬಿ.ಎಫ್. ಪೂಜಾರ, ಕ.ಪ್ರೌ.ಶಿ. ಸಂಘದ ಅಧ್ಯಕ್ಷ ವಿ.ಎಮ್. ಹಿರೇಮಠ, ತಾಲೂಕು ಪ್ರೌಢ ಶಾಲಾ ಶಿಕ್ಷಣ ಸಂಘದ ಅಧ್ಯಕ್ಷ ರವಿರಾಜ ಪವಾರ, ವಿಷಯ ಪರಿವಿಕ್ಷಕರು ಶ್ರೀಮತಿ ಗೀತಾ ಕುಲಕರ್ಣಿ, ಅಸುಂಡಿ Pಆಔ ಎಮ್.ಡಿ ಹೊಸಮನಿ, ಪ.ಜಾ / ಪ.ಪಂ ಶಿಕ್ಷಕರ ಸಂಘದ ಅಧ್ಯಕ್ಷ ವಿ.ಎಫ್. ಕಲಕುಂಬಿ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಶಂಕರ ಹಡಗಲಿ, ಹರ್ತಿ ಸಿ.ಆರ್.ಪಿ ಶ್ರೀಮತಿ ಶೈಲಜಾ ಮಟ್ಟಿ, ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಡಾ.ಬಸವರಾಜ .ವ್ಹಿ.ಬಳ್ಳಾರಿ, ಅಸುಂಡಿ ಗ್ರಾಮ ಪಂಚಾಯಿತಿ ಆಡಳಿತಧಿಕಾರಿ ಎಚ್.ವೈ. ಹೊನ್ನಿ ನಾಯ್ಕರ, ಶಿಕ್ಷಣ ಪ್ರೇಮಿ ಸೋಮರೆಡ್ಡಿ ರಾಮೇನಳ್ಳಿ, ಎಸ್.ಡಿ.ಎಂ.ಸಿ ಅಧ್ಯಕ್ಷ ಶಿವಾನಂದ ಕರಿಗಾರ, ಮಾಜಿ ಎಸ್.ಡಿ.ಎಂ.ಸಿ ಅಧ್ಯಕ್ಷ ಫಕಿರೆಡ್ಡಿ ಮಾಡಳ್ಳಿ, ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ತಾಜುದ್ದೀನ ಓಲೇಕಾರ, ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷೆ ಶ್ರೀಮತಿ ರೇಖಾ ತಿಮ್ಮನಗೌಡ್ರ, ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು, ಗ್ರಾಮ ಪಂಚಾಯಿತಿ ಪ್ರತಿನಿಧಿಗಳು, ಗ್ರಾಮಸ್ಥರು, ಪಾಲಕರು, ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.