Home ಮುಖಪುಟ ಸುದ್ದಿ ಕಾಂಗ್ರೆಸ್ ಸರ್ಕಾರ ಶೀಘ್ರ ಪತನ

ಕಾಂಗ್ರೆಸ್ ಸರ್ಕಾರ ಶೀಘ್ರ ಪತನ

ಬಿವೈವಿ ಭವಿಷ್ಯ
ಬೆಂಗಳೂರು, ಜೂ. ೫-
ಅಧಿಕಾರ ದಾಹವೆ ಕಾಂಗ್ರೆಸ್‌ನ ಪರಮೋಚ್ಛ ಉದ್ಧೇಶ. ಜನರ ಕಲ್ಯಾಣವಲ್ಲ ಮೊದಲು ಕಾಂಗ್ರೆಸ್‌ನಲ್ಲಿ ಸಿಎಂ ಕುರ್ಚಿಗಾಗಿ ಕಿತ್ತಾಡುತ್ತಿದ್ದರು. ಈಗ ಸಚಿವ ಸ್ಥಾನ, ಖಾತೆಗಾಗಿ ಕಿತ್ತಾಡುತ್ತಿದ್ದಾರೆ. ಈ ಸರ್ಕಾರ ಅತಿ ಶೀಘ್ರದಲ್ಲೇ ಪತನಗೊಳ್ಳಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ.


ಕಾಂಗ್ರೆಸ್ ಸರ್ಕಾರಕ್ಕೆ ಜನರ ಕಲ್ಯಾಣ ಮುಖ್ಯವಲ್ಲ, ರೈತರ ಸಮಸ್ಯೆಗಳೂ ಮುಖ್ಯವಲ್ಲ, ಅಧಿಕಾರ ಮುಖ್ಯ. ಭ್ರಷ್ಟಾಚಾರ ಅಧಿಕಾರ ಲಾಲಸೆ ಹಾಗೂ ಲಾಭದಾಯಕ ಹುದ್ದೆಗಳಿಗೆ ಕಿತ್ತಾಟ ನಡೆದಿದೆ. ಈ ಸರ್ಕಾರ ಪತನಗೊಂಡು ಮಧ್ಯಂತರ ಚುನಾವಣೆ ಬಂದರೂ ಅಚ್ಚರಿ ಇಲ್ಲ ಎಂದರು.


ಜನವಿರೋಧಿ ಈ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಬೇಕು ಎಂಬುದು ಜನರ ಆಪೇಕ್ಷೆಯಾಗಿದೆ. ಜನರು ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆದು ಬದಲಾವಣೆ ತರಲು ಬಯಸಿದ್ದಾರೆ. ಮತದಾರರು ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ಆಶೀರ್ವಾದ ಮಾಡುವ ಮನಸ್ಥಿತಿಯಲ್ಲಿದ್ದಾರೆ ಎಂದು ಹೇಳಿದರು.


ಬೆಂಗಳೂರು ಅಭಿವೃದ್ಧಿ ಖಾತೆಗೆ ಪಟ್ಟು ಹಿಡಿದು ಹಿರಿಯ ಸಚಿವ ರಾಮಲಿಂಗಾರೆಡ್ಡಿ ಅವರು ರಾಜೀನಾಮೆ ನೀಡಿದ್ದಾರೆ. ನನಗೆ ರಾಮಲಿಂಗಾರೆಡ್ಡಿ ಅವರ ಬಗ್ಗೆ ಅಪಾರ ಗೌರವ ಇದೆ. ಅವರ ಬಗ್ಗೆ ಮಾತನಾಡಲ್ಲ ಅವರ ಈ ರಾಜೀನಾಮೆ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯಲಿದೆ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದರು.


ಮುಂಗಾರು ಹಂಗಾಮು ಆರಂಭವಾಗುತ್ತಿರುವ ಈ ಸಂದರ್ಭದಲ್ಲಿ ರೈತರಿಗೆ ಬಿತ್ತನೆ, ರಸಗೊಬ್ಬರ ನೀಡಬೇಕಾದ ರಾಜ್ಯ ಸರ್ಕಾರದ ಅಧಿಕಾರದ ಕಿತ್ತಾಟದಲ್ಲಿ ತೊಡಗಿರುವುದು ಕರ್ನಾಟಕ ದುರಂತವೆ ಸರಿ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸರ್ಕಾರದ ಆತಂರಿಕ ಕಚ್ಚಾಟವನ್ನು ಬದಿಗೊತ್ತಿ ರಾಜ್ಯದ ರೈತರು, ಕೃಷಿಕರು, ಕಾರ್ಮಿಕರು, ಬಡವರ ಹಿತ ಕಾಪಾಡಬೇಕು. ಇಲ್ಲದಿದ್ದರೆ ಒಂದೂ ಕ್ಷಣವೂ ಅಧಿಕಾರದಲ್ಲಿ ಉಳಿಯದೆ ರಾಜೀನಾಮೆ ಕೊಟ್ಟು ಮತ್ತೊಮ್ಮೆ ಜನಾದೇಶ ಪಡೆಯಬೇಕು ಎಂದು ವಿಜಯೇಂದ್ರ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಫೋಸ್ಟ್ ಮಾಡಿದ್ದಾರೆ.