
ಕಲಬುರಗಿ: ವಿದ್ಯಾರ್ಥಿನಿಯರಿಗಾಗಿ ಮೀಸಲಾದ ರೇಷನ್ ದುರ್ಬಳಕೆ ಕುರಿತು ಕ್ರಿಮಿನಲ್ ಪ್ರಕರಣ ದಾಖಲಿಸಿ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಇಂದು ಪ್ರತಿಭಟನೆ ನಡೆಸಲಾಯಿತು. ಎಬಿವಿಪಿ ಮಹಾನಗರ ಕಾರ್ಯದರ್ಶಿ ಶರಣು ಪೂಜಾರಿ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

























