
ಚಿಂಚೋಳಿ,ಜೂ.5: ತಾಲೂಕಿನ ಮಿರಿಯಾಣ ಗ್ರಾಮದ ಸಮೀಪ ಗುರುವಾರ ತಡರಾತ್ರಿ ಎರಡು ಲಾರಿಗಳ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.
ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಜಖಂಗೊಂಡಿದ್ದು, ಸ್ಥಳದಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು.
ಅಪಘಾತದಲ್ಲಿ ಗಾಯಗೊಂಡವರನ್ನು ಸ್ಥಳೀಯರು ಹಾಗೂ ಪೆÇಲೀಸರು ತಕ್ಷಣ ರಕ್ಷಿಸಿ ಹೆಚ್ಚಿನ ಚಿಕಿತ್ಸೆಗೆ ಬೀದರ್ ಹಾಗೂ ಕಲಬುರಗಿ ಆಸ್ಪತ್ರೆಗಳಿಗೆ ರವಾನಿಸಿದ್ದಾರೆ. ಕೆಲವರ ಸ್ಥಿತಿ ಗಂಭೀರವಾಗಿರುವುದಾಗಿ ತಿಳಿದುಬಂದಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಮಿರಿಯಾಣ ಪೆÇಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು .ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿದಿದ್ದು, ಈ ಸಂಬಂಧ ಮಿರಿಯಾಣ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಸ್ಥಳೀಯರ ಪ್ರಕಾರ, ರಾತ್ರಿ ವೇಳೆ ವೇಗವಾಗಿ ಸಂಚರಿಸುತ್ತಿದ್ದ ಲಾರಿಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಅಪಘಾತದ ಸದ್ದು ಕೇಳಿ ಸುತ್ತಮುತ್ತಲಿನ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯದಲ್ಲಿ ನೆರವಾದರು.
ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ

























