Home ಜಿಲ್ಲೆ ಮೈಸೂರು ಹೆಚ್.ಟಿ.ಮಂಜು ಹುಟ್ಟುಹಬ್ಬ ಹಿನ್ನೆಲೆ: 22ಕ್ಕೆ ಬೃಹತ್ ಸಮಾವೇಶ

ಹೆಚ್.ಟಿ.ಮಂಜು ಹುಟ್ಟುಹಬ್ಬ ಹಿನ್ನೆಲೆ: 22ಕ್ಕೆ ಬೃಹತ್ ಸಮಾವೇಶ

ಸಂಜೆವಾಣಿ ನ್ಯೂಸ್
ಚಾಮರಾಜನಗರ, ಜೂ.07:-
ಕ್ಷೇತ್ರದ ಶಾಸಕ ಹೆಚ್.ಟಿ.ಮಂಜು ಅವರನ್ನು ಮುಂಬರುವ 2028ಕ್ಕೂ ಮತ್ತೊಮ್ಮೆ ಶಾಸಕರನ್ನಾಗಿ ಮಾಡುವುದು ತಾಲ್ಲೂಕಿನ ನಿಷ್ಠಾವಂತ ಜೆಡಿಎಸ್ ಕಾರ್ಯಕರ್ತರೆಲ್ಲರ ಒಮ್ಮತಾಭಿಪ್ರಾಯವಾಗಿದೆ ಎಂದು ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಮಲ್ಲೇನಹಳ್ಳಿ ಮೋಹನ್ ತಿಳಿಸಿದರು.

ಅವರು ಪಟ್ಟಣದ ಬಸವೇಶ್ವರನಗರದಲ್ಲಿರುವ ಜೆಡಿಎಸ್ ಕಚೇರಿಯ ಆವರಣದಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಶಾಸಕ ಹೆಚ್.ಟಿ.ಮಂಜು ರವರ ಹುಟ್ಟುಹಬ್ಬದ ಹಿನ್ನೆಲೆ ಜೂ.22 ರಂದು ಬೃಹತ್ ಸಮಾವೇಶ ಏರ್ಪಡಿಸಿದ್ದು ಈ ಹುಟ್ಟುಹಬ್ಬದ ಸಮಾವೇಶವನ್ನು ಜೆಡಿಎಸ್ ಕಾರ್ಯಕರ್ತರು ತಮ್ಮ ಸ್ವಂತ ಖರ್ಚಿನಿಂದ ಆಚರಿಸಲು ನಿರ್ಧರಿಸಿದ್ದು ಸುಮಾರು 30 ಸಾವಿರ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ಜೂ.22ರಂದು ನಡೆಯುವ ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ರೈತರಿಗೆ ತೆಂಗಿನ ಸಸಿಗಳು ಹಾಗೂ ವಿವಿಧ ಬಗೆಯ ಹೂವು ಮತ್ತು ಹಣ್ಣಿನ ಸಸಿಗಳನ್ನು ವಿತರಣೆ ಮಾಡಲಾಗುವುದು. ಸಮಾವೇಶವನ್ನು ರಾಜ್ಯ ಯುವ ಜೆಡಿಎಸ್ ಅಧ್ಯಕ್ಷ ನಿಖಿಲ್‍ಕುಮಾರಸ್ವಾಮಿ ಉದ್ಘಾಟನೆ ಮಾಡುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಡಿ.ರಮೇಶ್, ಶಾಸಕರಾದ ಜಿ.ಡಿ.ಹರೀಶ್‍ಗೌಡ, ಸಿ.ಎನ್.ಬಾಲಕೃಷ್ಣ, ಸ್ವರೂಪ್ ಪ್ರಕಾಶ್, ಮಾಜಿ ಶಾಸಕರಾದ ಕೆ.ಸುರೇಶ್‍ಗೌಡ, ಡಾ.ಕೆ.ಅನ್ನಧಾನಿ,ರವೀಂದ್ರ ಶ್ರೀಕಂಠಯ್ಯ ಸೇರಿದಂತೆ ವಿವಿಧ ಗಣ್ಯರು ಭಾಗವಹಿಸುವರು. ಕಾರ್ಯಕ್ರಮದಲ್ಲಿ ಭಾಗವಹಿಸುವ ಎಲ್ಲಾ ಕಾರ್ಯಕರ್ತರಿಗೆ ತಾಲ್ಲೂಕು ಜೆಡಿಎಸ್ ಘಟಕದ ವತಿಯಿಂದ ಸಸ್ಯಹಾರ ಹಾಗೂ ಮಾಂಸಹಾರಿ ಊಟೋಪಚಾರದ ವ್ಯವಸ್ಥೆ ಮಾಡಲಾಗುವುದು. ಸದರಿ ಸಮಾವೇಶವನ್ನು ಮುಂಬರುವ ಜಿ.ಪಂ, ತಾ.ಪಂ, ಗ್ರಾ.ಪಂ, ಪುರಸಭಾ ಚುನಾವಣೆಯಲ್ಲಿ ದೃಷ್ಠಿಯನ್ನಿಟ್ಟುಕೊಂಡು ಆಯೋಜಿಸಲಾಗಿದೆ. ಜೊತೆಗೆ 2028ಕ್ಕೆ ಮತ್ತೊಮ್ಮೆ ಕ್ಷೇತ್ರದಲ್ಲಿ ಹೆಚ್.ಟಿ.ಮಂಜಣ್ಣ ಅವರನ್ನು ಶಾಸಕರನ್ನಾಗಿ ಮಾಡುವ ಪ್ರಮುಖ ಗುರಿಯೊಂದಿಗೆ ಈ ಬೃಹತ್ ಸಮಾವೇಶವನ್ನು ಆಯೋಜಿಸಲಾಗುತ್ತಿದೆ.

ಈ ತಾಲ್ಲೂಕು ಜೆಡಿಎಸ್ ಪಕ್ಷದ ಭದ್ರಕೋಟೆ ಎಂಬುದು ಕಳೆದ ಹಲವು ಚುನಾವಣೆಗಳಲ್ಲಿ ಸಾಬೀತಾಗಿದೆ. ಈಗಿನ ಕಾಂಗ್ರೆಸ್ ಸರ್ಕಾರದಲ್ಲಿ ನಮ್ಮ ಶಾಸಕರಾದ ಹೆಚ್.ಟಿ.ಮಂಜಣ್ಣ ಅವರು ತಾಲ್ಲೂಕಿನಲ್ಲಿ ನಿರೀಕ್ಷಿತ ಅಭಿವೃದ್ಧಿ ಸಾಧಿಸಲು ಸಾಧ್ಯವಾಗುತ್ತಿಲ್ಲ. ತಾಲ್ಲೂಕಿನಲ್ಲಿ ಸಮಸ್ಯೆ ಬೆಟ್ಟದಷ್ಟು ಇದೆ ಆದರೆ ಅನುಧಾನ ಮಾತ್ರ ತೀರಾ ಕಡಿಮೆ ಇದೆ ಎಂದು ತಿಳಿಸಿದರು.

ನಮ್ಮ ಶಾಸಕರು ಅವರ ನಿರೀಕ್ಷೆಗೂ ಮೀರಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲದ ಕಾರಣ 2028ಕ್ಕೂ ಮತ್ತೊಮ್ಮೆ ಗೆಲ್ಲುವುದು ಅನಿವಾರ್ಯವಾಗಿದೆ. ಜೆಡಿಎಸ್-ಬಿಜೆಪಿ ಮೈತ್ರಿ ಸರ್ಕಾರವು ಅಧಿಕಾರಕ್ಕೆ ಬರುವುದು ಖಚಿತವಾಗಿದೆ. ಆಗ ಮಂಜಣ್ಣ ಸಚಿವರಾಗುವ ಅವಕಾಶ ಇರುವ ಕಾರಣ ಶಾಸಕರನ್ನಾಗಿ ಮಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಹಾಗಾಗಿ ಜೂ.22ರಂದು ನಡೆಯುವ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶಕ್ಕೆ ಹೆಚ್ಚಿನ ಕಾರ್ಯಕರ್ತರು ಆಗಮಿಸಿ ಸಮಾವೇಶವನ್ನು ಯಶಸ್ವಿಗೊಳಿಸಿಕೊಡಬೇಕು ಎಂದು ಮಲ್ಲೇನಹಳ್ಳಿ ಮೋಹನ್ ಮನವಿ ಮಾಡಿದರು.

ಪೂರ್ವಭಾವಿ ಸಭೆಯಲ್ಲಿ ತಾಲ್ಲೂಕು ಜೆಡಿಎಸ್ ಪಕ್ಷದ ಕಾರ್ಯಾಧ್ಯಕ್ಷರಾದ ವಳಗೆರೆ ಮೆಣಸ ಮಹಾದೇವೇಗೌಡ, ಗೌರವಾಧ್ಯಕ್ಷ ತೋಟಪ್ಪಶೆಟ್ಟಿ, ಜೆಡಿಎಸ್ ರಾಜ್ಯ ಪರಿಷತ್ ಸದಸ್ಯ ಅಕ್ಕಿಹೆಬ್ಬಾಳು ರಘು, ರಾಜ್ಯ ಯುವ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಕೆ.ಬಿ.ನಾಗೇಶ್, ಜಿಲ್ಲಾ ದಿಶಾ ಕಮಿಟಿ ಸದಸ್ಯ ನರಸನಾಯಕ್, ಎ.ಪಿ.ಎಂ.ಸಿ ಮಾಜಿ ಅಧ್ಯಕ್ಷ ಐನೋರಹಳ್ಳಿ ಮಲ್ಲೇಶ್, ಡಿಸಿಸಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ಹೆಚ್.ಕೆ.ಅಶೋಕ್, ಕಟ್ಟೆಕ್ಯಾತನಹಳ್ಳಿ ಚಂದ್ರೇಗೌಡ, ಬಲ್ಲೇನಹಳ್ಳಿ ರಾಮಚಂದ್ರು, ಬೇಲದಕೆರೆ ನಂಜಪ್ಪ, ತಾಲ್ಲೂಕು ಜೆಡಿಎಸ್ ರೈತ ಮೋರ್ಚಾ ಅಧ್ಯಕ್ಷ ಹುಲ್ಲೇಗೌಡ, ತಾಲ್ಲೂಕು ಜೆಡಿಎಸ್ ಕಾನೂನು ಘಟಕದ ಅಧ್ಯಕ್ಷ ವಿ.ಎಸ್.ಧನಂಜಯಕುಮಾರ್, ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷ ಎಂ.ಆರ್.ಮನು, ತಾಲ್ಲೂಕು ಟಿಎಪಿಸಿಎಂಎಸ್ ಅಧ್ಯಕ್ಷ ಬಲದೇವ್, ನಿರ್ದೇಶಕರಾದ ಎಸ್.ಎಲ್.ಮೋಹನ್, ಎನ್.ಕೆ.ದಿಲೀಪ್‍ಕುಮಾರ್, ಕೆ.ಬಿ.ಮಧು, ಹೆಚ್.ಟಿ.ಲೋಕೇಶ್, ಕೊರಟಿಕೆರೆ ದಿನೇಶ್, ತಾಲ್ಲೂಕು ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ರೇಖಾಲೋಕೇಶ್, ಪ್ರಧಾನ ಕಾರ್ಯದರ್ಶಿ ರತಿಮಹಾದೇವ್, ತಾಲ್ಲೂಕು ಜೆಡಿಎಸ್ ಎಸ್.ಸಿ.ಘಟಕದ ಅಧ್ಯಕ್ಷ ನರಸಿಂಹ, ಪ್ರಧಾನ ಕಾರ್ಯದರ್ಶಿ ಆರ್.ಟಿ.ಉಮೇಶ್, ತಾಲ್ಲೂಕು ಯುವ ಜೆಡಿಎಸ್ ಅಧ್ಯಕ್ಷ ಮೀಸೆ ಮಹಾದೇವೇಗೌಡ, ಹೋಬಳಿ ಘಟಕಗಳ ಜೆಡಿಎಸ್ ಅಧ್ಯಕ್ಷರಾದ ಸಂತೇಬಾಚಹಳ್ಳಿ ಸಾಮಿಲ್ ರವಿಕುಮಾರ್, ಕಸಬಾ ವಸಂತ ಕುಮಾರ್, ಶೀಳನೆರೆ ಸ್ವಾಮೀಗೌಡ, ಅಕ್ಕಿಹೆಬ್ಬಾಳು ಬಸವಲಿಂಗಪ್ಪ, ಮಾಂಬಹಳ್ಳಿ ಅಶೋಕ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಸೋಮಶೇಖರ್, ಚಿಕ್ಕಗಾಡಿಗನಹಳ್ಳಿ ಪರಮೇಶ್ ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಮುಖಂಡರು ಕಾರ್ಯಕರ್ತರು ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ್ದರು.