Home ಜಿಲ್ಲೆ ಮಂಗಳೂರು ಬೆಳ್ಳಾರೆ: ಶಿಕ್ಷಕರು, ವಿದ್ಯಾರ್ಥಿಗಳಿಗೆ ವಿಪತ್ತು ನಿರ್ವಹಣೆ ತರಬೇತಿ

ಬೆಳ್ಳಾರೆ: ಶಿಕ್ಷಕರು, ವಿದ್ಯಾರ್ಥಿಗಳಿಗೆ ವಿಪತ್ತು ನಿರ್ವಹಣೆ ತರಬೇತಿ

ಮಂಗಳೂರು-ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್.ಡಿ.ಆರ್.ಎಫ್) ವತಿಯಿಂದ ಮಳೆಗಾಲದಲ್ಲಿ ವಿವಿಧ ರೀತಿಯ ಪ್ರಾಕೃತಿಕ ಘಟನೆಗಳನ್ನು ನಿರ್ವಹಿಸುವ ಬಗ್ಗೆ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಮಾಹಿತಿ ಮತ್ತು ಪ್ರದರ್ಶನ ಕಾರ್ಯಕ್ರಮ ಸುಳ್ಯ ತಾ. ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಮಂಗಳವಾರ ನಡೆಯಿತು.
ಕಾರ್ಯಕ್ರಮದಲ್ಲಿ ಎನ್.ಡಿ.ಆರ್.ಎಫ್. ಅಧಿಕಾರಿಗಳು ವಿವಿಧ ಪ್ರಾಕೃತಿಕ ವಿಪತ್ತುಗಳ ಅರಿವು, ಅವುಗಳ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಸಿದ್ಧತೆಗಳ ಬಗ್ಗೆ ಮಾಹಿತಿ ನೀಡಿದರು. ವಿಪತ್ತು ಸಂದರ್ಭದಲ್ಲಿ ವಹಿಸಬೇಕಾದ ಮುನ್ನಚ್ಚರಿಕೆಗಳ ಕುರಿತು ಪ್ರಾಯೋಗಿಕವಾಗಿ ತೋರಿಸಲಾಯಿತು.
ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.