Home ಜಿಲ್ಲೆ ಬೆಂಗಳೂರು ಮೋದಿ, ಯೋಗಿ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

ಮೋದಿ, ಯೋಗಿ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

ಬೆಂಗಳೂರು, ಜೂ. ೨೯- ಅಯೋಧ್ಯೆ ಶ್ರೀರಾಮ ಮಂದಿರ ಹುಂಡಿ ಹಣ ದುರುಪಯೋಗ ಪ್ರಕರಣದ ಕುರಿತು ಸಮಗ್ರ ತನಿಖೆ ಹಾಗೂ ಶ್ರೀ ರಾಮನ ಹೆಸರಿನಲ್ಲಿ ರಾಜಕೀಯ ದುರುಪಯೋಗಪಡಿಸಿಕೊಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ರಾಜಕೀಯ ನೈತಿಕ ಹೊಣೆಗಾರಿಕೆ ಹೊತ್ತು ರಾಜೀನಾಮೆ ನೀಡುವಂತೆ ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸಿದ್ದಾರೆ.
ನಗರದ ಗಾಂಧಿ ಪ್ರತಿಮೆ ಬಳಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕಾರ್ಯಕರ್ತರು.

ಅಯೋಧ್ಯೆ ಶ್ರೀರಾಮ ಮಂದಿರದ ಹುಂಡಿ ಹಣ, ಚಿನ್ನ ಹಾಗೂ ಬೆಳ್ಳಿ ದುರುಪಯೋಗಕ್ಕೆ ಸಂಬಂಧಿಸಿದ ಪ್ರಕರಣವು ದೇಶದ ಕೋಟ್ಯಾಂತರ ಭಕ್ತರ ಭಾವನೆಗಳಿಗೆ ತೀವ್ರ ಆಘಾತ ಉಂಟುಮಾಡಿದೆ. ಶ್ರೀರಾಮನ ಹೆಸರಿನಲ್ಲಿ ದೇಶದಾದ್ಯಂತ ಭಕ್ತರಿಂದ ಸಂಗ್ರಹಿಸಲಾದ ದೇಣಿಗೆಯ ಭದ್ರತೆ ಮತ್ತು ಪಾರದರ್ಶಕತೆ ಕುರಿತು ಗಂಭೀರ ಪ್ರಶ್ನೆಗಳು ಉದ್ಭವಿಸಿವೆ ಎಂದಿದ್ದಾರೆ.

ಶ್ರೀರಾಮನ ಭಕ್ತರು ಸಲ್ಲಿಸಿದ ದೇಣಿಗೆ ದುರುಪಯೋಗವಾಗಲು ಕಾರಣವಾದ ಆಡಳಿತಾತ್ಮಕ ವೈಫಲ್ಯಗಳಿಗೆ ಯಾರು ಹೊಣೆ?, ದೇವಸ್ಥಾನದ ಹುಂಡಿ ಹಣದ ಸುರಕ್ಷತೆಯಲ್ಲಿ ಲೋಪಗಳಾಗಿದ್ದರೆ, ಅದರ ಬಗ್ಗೆ ಸರ್ಕಾರ ಮತ್ತು ಸಂಬಂಧಿತ ಸಂಸ್ಥೆಗಳು ಯಾವ ಕ್ರಮ ಕೈಗೊಂಡಿವೆ?, ಪ್ರಕರಣದ ಸಂಪೂರ್ಣ ಸತ್ಯ ದೇಶದ ಜನತೆಗೆ ತಿಳಿಯುವಂತೆ ಸ್ವತಂತ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಲು ಸರ್ಕಾರ ಸಿದ್ಧವೇ? ತಪ್ಪಿತಸ್ಥರು ಯಾರೇ ಆಗಿರಲಿ, ಅವರ ವಿರುದ್ಧ ಯಾವುದೇ ರಾಜಕೀಯ ಅಥವಾ ಸಂಘಟನಾತ್ಮಕ ಪ್ರಭಾವವಿಲ್ಲದೆ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದೇ? ಎಂದು ಪ್ರಶ್ನಿಸಿದ್ದಾರೆ.

ಈ ಪ್ರತಿಭಟನೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ಅವರ ನೇತೃತ್ವದಲ್ಲಿ ರೇಸ್ ಕೋರ್ಸ್ ರಸ್ತೆ ಕಾಂಗ್ರೆಸ್ ಭವನ ಬಳಿ ನೆರೆವೇರಿತು ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಅನಂತ್ ಕುಮಾರ್ ಎಂ. ಎಸ್ ಬೆಂಗಳೂರು ಗ್ಯಾರಂಟಿ ಪ್ರಾಧಿಕಾರ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾದ ಜಿ.ಜನಾರ್ದನ್, ಆದಿತ್ಯ, ಆನಂದ್,ಚಿನ್ನಿ ಪ್ರಕಾಶ್ ಬೆಂಗಳೂರು ಪಶ್ಚಿಮ ಡಿಸಿಸಿ ಉಪಾಧ್ಯಕ್ಷರಾದ ಕುಶಲ ಅರವೇ ಗೌಡ, ಪುಟ್ಟರಾಜು,ರಂಜಿತ್,ಪವನ್,ಪ್ರವೀಣ್ ರಾವ್, ಚಂದ್ರು,ನವೀನ್, ಸುರೇಶ್ ಮತ್ತಿತರರು ಭಾಗವಹಿಸಿದ್ದರು.