
ಸಂಜೆವಾಣಿ ವಾರ್ತೆ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ “ರಾಷ್ಟ್ರೀಯ ಪಲ್ಸ್ ಪೋಲಿಯೋ-2026” ಮಹಾ ಅಭಿಯಾನಕ್ಕೆ ಅತ್ಯಂತ ಯಶಸ್ವಿ ಚಾಲನೆ ನೀಡಲಾಯಿತು.
ಬೆಂಗಳೂರಿನ ಎನ್.ವಿ.ಬಿ.ಡಿ.ಸಿ.ಪಿ ವಿಭಾಗದ ಪ್ರಾದೇಶಿಕ ಅಧಿಕಾರಿ ಹಾಗೂ ಜಿಲ್ಲಾ ನೋಡಲ್ ಅಧಿಕಾರಿ ಡಾ. ನಾಗರಾಜ್ ಅವರು ಮಗುವಿಗೆ ಲಸಿಕೆ ಹಾಕುವ ಮೂಲಕ ಅಧಿಕೃತವಾಗಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಲ್.ಆರ್.ಶಂಕರ್ ನಾಯ್ಕ, ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಹಾಗೂ ಜಿಲ್ಲಾ ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಡಾ. ಜಂಬಯ್ಯ, ತಾಲೂಕು ಆರೋಗ್ಯ ಅಧಿಕಾರಿ ಡಾ.ವಿನೋದ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಂ.ಪಿ.ದೊಡ್ಡಮನಿ, ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ನೂರ್ ಭಾಷಾ, ಡಾ. ಚಂದ್ರಮೋಹನ್, ಡಾ. ಹರ್ಷಿತಾ ಕುಲಕರ್ಣಿ ಸೇರಿದಂತೆ ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
























