
ಬೆಂಗಳೂರು, ಜೂ.೩೦- ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದಿರುವವರಿಗೆ ಗ್ಯಾರಂಟಿ ಸೇರಿದಂತೆ ಸರ್ಕಾರದ ಯಾವ ಸೌಲಭ್ಯವು ಸಿಗುವುದಿಲ್ಲ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು ಟ ಸದಾಶಿವನಗರ ನಿವಾಸದಲ್ಲಿ ಇಂದು ಬೆಳಿಗ್ಗೆ ಬೆಂಗಳೂರು ದಕ್ಷಿಣ ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ .ತಮ್ಮ ಎನ್ಯುಮರೇಶನ್ ಫಾರಂ (ಗಣತಿ ನಮೂನೆ) ಭರ್ತಿ ಮಾಡುವ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಅವರು ರಾಜ್ಯದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಗೆ ಚಾಲನೆ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಮ್ಮ ರಾಜ್ಯದ ಮತದಾರರಲ್ಲದವರಿಗೆ ಗ್ಯಾರಂಟಿ ಸೇರಿದಂತೆ ಸರ್ಕಾರದ ಸೌಲಭ್ಯಗಳನ್ನು ಕೊಡುವುದರಲ್ಲಿ ಅರ್ಥವಿಲ್ಲ ಬಿಹಾರ ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳಲ್ಲಿ ಈಗಾಗಲೇ ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದವರಿಗೆ ಸೌಲಭ್ಯಗಳನ್ನು ನಿಲ್ಲಿಸಲಾಗಿದೆ.
ರಾಜ್ಯದಲ್ಲೂ ಅದೇ ರೀತಿ ಆಗುತ್ತದೆ ಎಂದು ಹೇಳಿದರು ಪ್ರತಿಯೊಬ್ಬರೂ ಮತದಾರರ ಪಟ್ಟಿಯಲ್ಲಿ ಹೆಸರು ಇರುವಂತೆ ನೋಡಿಕೊಳ್ಳಬೇಕು ಎಂದು ಅವರು ತಿಳಿಸಿದರು
“ರಾಜ್ಯದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಟ ಆರಂಭವಾಗಿದ್ದು, ನನ್ನ ಮನೆಯಿಂದಲೇ ಈ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ನನ್ನ ಎನ್ಯುಮರೇಷನ್ ಅರ್ಜಿಯನ್ನು ಭರ್ತಿ ಮಾಡಿ ಸಹಿ ಮಾಡಿ ಸಲ್ಲಿಕೆ ಮಾಡಿರುವೆ. ನೀವು ನಿಮ್ಮ ಹೆಸರಿನ ಜೊತೆಗೆ ಈ ಹಿಂದೆ ಮತದಾರ ಪಟ್ಟಿ ಸಮಯದಲ್ಲಿ ನೀಡಲಾಗಿದ್ದ ದೂರವಾಣಿ ಸಂಖ್ಯೆಯನ್ನು ನಮೂದಿಸಬೇಕಾಗುತ್ತದೆ. ಇಲ್ಲವಾದರೆ ಹೊಸ ಮೊಬೈಲ್ ಸಂಖ್ಯೆಯನ್ನು ಅಧಿಕಾರಿಗಳ ಮೂಲಕ ಸೇರ್ಪಡೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗುವುದು. ಯಾವ ಸಂಖ್ಯೆ ನೀಡಿರುತ್ತಿರೋ ಅದೇ ಸಂಖ್ಯೆಗೆ ಒಟಿಪಿ ಬರಲಿದೆ” ಎಂದು ಮಾಹಿತಿ ನೀಡಿದರು.
“ನೀವು ನಿಮ್ಮ ಹೆಸರಿನಲ್ಲಿ ತಿದ್ದುಪಡಿ ಮಾಡಿಕೊಳ್ಳಲು ಅವಕಾಶವಿದೆ. ಬಿಎಲ್ಎ, ಬಿಎಲ್ಓ ಹಾಗೂ ಮೇಲ್ವಿಚಾರಕರು ಈಗಾಗಲೇ ವಾಟ್ಸಪ್ ಗ್ರೂಪ್ ಮಾಡಿಕೊಂಡಿದ್ದಾರೆ. ಕುಟುಂಬದ ಸದಸ್ಯರ ಪೈಕಿ ಒಬ್ಬರು ಸಹಿ ಮಾಡಿದರೂ ಸಾಕು. ಕುಟುಂಬದವರ ಪರವಾಗಿ ಒಬ್ಬರೇ ಎಲ್ಲರ ಅರ್ಜಿ ತುಂಬಬಹುದು. ಅದನ್ನು ಸ್ವೀಕಾರ ಮಾಡಿಕೊಳ್ಳಲಾಗುವುದು. ನಿಮ್ಮ ಫೋಟೋ ಬದಲಾಯಿಸಿಕೊಳ್ಳಬೇಕಾದರೆ ಅರ್ಜಿಯಲ್ಲಿ ಹೊಸ ಫೋಟೋ ನೀಡಬಹುದು. ಹೊಸ ಮತದಾರರು ನಿವಾಸ ದೃಢೀಕರಣ ಪತ್ರ ನೀಡಬೇಕು. ಕರ್ನಾಟಕ ಸರ್ಕಾರ ರಾಜ್ಯದ ಜನರಿಗೆ ಅಗತ್ಯ ಪ್ರಮಾಣಪತ್ರ ನೀಡಲು ಮುಂದಾಗಿದೆ. ಎಲ್ಲರೂ ತಮ್ಮ ಮತದಾನದ ಹಕ್ಕು ಉಳಿಸಿಕೊಳ್ಳಬೇಕು.
ಉಳಿಸಿಕೊಳ್ಳದಿದ್ದರೆ ಸರ್ಕಾರ ಸೌಲಭ್ಯ, ಕಾರ್ಯಕ್ರಮಗಳನ್ನು ಪಡೆಯುವುದು ಕಷ್ಟವಾಗಲಿದೆ” ಎಂದು ಮಾಹಿತಿ ನೀಡಿದರು.
ಕೆಲವು ಅನಕ್ಷರಸ್ಥರಿಗೆ ಆಪ್ ಬಳಸುವುದರ ಬಗ್ಗೆ ಮಾಹಿತಿ ಇರುವುದಿಲ್ಲ ಎಂದು ಕೇಳಿದಾಗ, “ಆಪ್ ಬಳಸುವ ವಿಚಾರದಲ್ಲಿ ನನಗೂ ಮಾಹಿತಿ ಇಲ್ಲ. ನಾನು ಬೇರೆಯವರ ಸಹಾಯ ಪಡೆದೆ. ಈ ಕಾರಣಕ್ಕೆ ಬಿಎಲ್ಓಗಳ ಮೂಲಕ ಅರ್ಜಿ ಪಡೆದು ಆಫ್ ಲೈನ್ ಮೂಲಕವೇ ಅರ್ಜಿ ತುಂಬಬಹುದು” ಎಂದು ತಿಳಿಸಿದರು.



























